
ಉಮಾಪತಿ ಶೆಟ್ಟರ್
ಹಗರಿಬೊಮ್ಮನಹಳ್ಳಿ. ಜೂ.29 ರಾಜ್ಯ ರಾಜಕಾರಣದಲ್ಲಿ ನೂತನ ಮುಖ್ಯಮಂತ್ರಿ ಯಾಗಿ ಕಾಂಗ್ರೆಸ್ ಪಕ್ಷದ ಡಿಕೆ ಶಿವಕುಮಾರ್ ಇತ್ತೀಚಿಗೆ ಅಧಿಕಾರ ವಹಿಸಿಕೊಂಡರು.
2023ರ ಸಾರ್ವತ್ರಿಕ ಚುನಾವಣೆಯಲ್ಲಿ 136 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಪಕ್ಷ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿತು. ಆಗ ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಹುದ್ದೆಯ ಮೇಲೆ ಕಣ್ಣಿಟ್ಟರು.
2013 ರಲ್ಲಿ ಮುಖ್ಯಮಂತ್ರಿಯಾಗಿ ಅವಧಿಯ ಪೂರ್ಣಗೊಳಿಸಿದ ಸಿದ್ದರಾಮಯ್ಯ ಕೂಡ ನನ್ನನ್ನೇ ಮುಖ್ಯಮಂತ್ರಿ ಮಾಡಬೇಕು ಎಂದು ಹಠಕ್ಕೆ ಬಿದ್ದರು. ಆಗ ಕೈ ಹೈಕಮಾಂಡ್ ಒಂದು ತೀರ್ಮಾನಕ್ಕೆ ಬಂದು ಅಧಿಕಾರ ಹಂಚಿಕೆ ಸೂತ್ರ ಮುಂದಿಟ್ಟರು. ಮೊದಲ ಅವಧಿಯ ಮುಖ್ಯಮಂತ್ರಿ ಎರಡು ವರ್ಷ ಎರಡನೆಯ ಅವಧಿ ಮುಖ್ಯಮಂತ್ರಿಗಳು ಮೂರು ವರ್ಷ ಎಂದು ಇಬ್ಬರ ಸಮ್ಮತಿಯ ನಡುವೆ ಒಪ್ಪಂದದ ಸೂತ್ರ ಮಾಡಿದರು.ಮೊದಲ ಅವಧಿ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಕುರ್ಚಿಯ ಮೇಲೆ ಕೂತರು. ಡಿಕೆ ಶಿವಕುಮಾರ್ ಉಪಮುಖ್ಯಮಂತ್ರಿಯಾಗಿ ನೇಮಕಗೊಂಡರು. ಸಿದ್ದರಾಮಯ್ಯ ಅಧಿಕಾರ ಅವಧಿ ಮುಗಿಯುತ್ತಾ ಬಂದರೂ.. ಬೆಂಬಲಿಗರು ಪವರ್ ಸ್ಟೇರಿಂಗ್ ಬಗ್ಗೆ ನಾನಾ ರೀತಿಯಲ್ಲಿ ಅಭಿಪ್ರಾಯ ವ್ಯಕ್ತಪಡಿಸುತ್ತಾ ಪೂರ್ಣಾವಧಿ ಮುಖ್ಯಮಂತ್ರಿ ಎಂದು ಬಿಂಬಿಸಿದರು. ಇದರ ಬಗ್ಗೆ ಡಿಕೆ ಶಿವಕುಮಾರ್ ಎಲ್ಲಿಯೂ ಮಾತನಾಡದೆ, ಮೌನವಾಗಿ ಸಹಿಸಿಕೊಂಡರು. ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಗಾಳಿ ಬೀಸುತ್ತಲೇ ಇತ್ತು. ಕೈ ಹೈಕಮಾಂಡ್ ಸೂಕ್ಷ್ಮವಾಗಿ ಎಲ್ಲವನ್ನು ಗಮನಿಸುತ್ತಾ ಮೂರು ವರ್ಷ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅಧಿಕಾರ ಪೂರ್ಣಗೊಳಿಸಿ ದೇವರಾಜ್ ಅರಸ್ ರವರ ದಾಖಲೆಯನ್ನು ಸರಿಗಟ್ಟಿದರು. ಆಗ ಮುಖ್ಯಮಂತ್ರಿ ಹುದ್ದೆಯಿಂದ ತ್ಯಜಿಸುತ್ತಾರೆ ಎಂಬ ಮಾತು ಕೇಳಿ ಬಂದಿತ್ತು . ಪವರ್ ಸ್ಟೇರಿಂಗ್ ಬಗ್ಗೆ ಸಿದ್ದರಾಮಯ್ಯ ಪದೇ ಪದೇ ಹೈಕಮಾಂಡ್ ಕಡೆ ಬೊಟ್ಟು ಮಾಡಿದರು. ಇದೇ ಸಮಯವನ್ನು ಕಾಯುತ್ತಿದ್ದ ಹೈಕಮಾಂಡ್ ಡೆಲ್ಲಿಗೆ ಬರುವಂತೆ ಬುಲಾವ್ ನೀಡಿ ಕೂಡಲೇ ರಾಜೀನಾಮೆ ನೀಡುವಂತೆ ಆದೇಶಿಸಿದರು. ತಾಳ್ಮೆಯಿಂದ ಮೂರು ವರ್ಷ ಕಾದು ಕುಳಿತ ಡಿಕೆ ಶಿವಕುಮಾರ್ ಗೆ ಮುಖ್ಯಮಂತ್ರಿ ಹುದ್ದೆ ಒಲಿದು ಬಂದಿತು. ಎರಡು ವರ್ಷ ಅವಧಿಗೆ ಮುಖ್ಯಮಂತ್ರಿ ಆಗಿರುವ ಡಿಕೆ ಶಿವಕುಮಾರ್ ತಮ್ಮ ಆಪ್ತರಿಗೆ ಹಾಗೂ ನಿಷ್ಠಾವಂತ ಕಾರ್ಯಕರ್ತರಿಗೆ ಸ್ಥಾನಮಾನ ಕಲ್ಪಿಸುತ್ತಾರೆ ಎಂಬ ಮಾತು ಕೇಳಿಬರುತ್ತದೆ. ವಿಜಯನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಶಿರಾಜ್ ಶೇಕ್ ಮೊದಲಿನಿಂದಲೂ ಡಿಕೆಶಿಗೆ ಅಪ್ತರಾಗಿದ್ದವರು. ಅವರ ಶಾಸಕರ ಅವಧಿಯಲ್ಲಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಹಾಗೂ ಡಿಕೆಶಿ ಸೇರಿದಂತೆ ಅರ್ಧ ಡಜನ್ ಸಚಿವರನ್ನು ಕರೆಸಿ ಕ್ಷೇತ್ರದಲ್ಲಿ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಉದ್ಘಾಟಿಸಿದ್ದರು. ವಸತಿಯ ಹರಿಕಾರ ಎಂದೇ ಹೆಸರಾಗಿರುವ ಶಿರಾಜ್ ಶೇಕ್ ರಾಜ್ಯ ರಾಜಕಾರಣದಲ್ಲಿ ಗುರುತಿಸಿಕೊಂಡವರು. ಪಕ್ಷ ಸಂಘಟನೆ, ಶಿಸ್ತು, ಸಮಯ ಪಾಲನೆಯಲ್ಲಿ ಖಡಕ್ ಅಂದರು ತಪ್ಪಲ್ಲ. ಇವರ ಹಿರಿತನಕ್ಕೆ ಮತ್ತು ಅನುಭವಕ್ಕೆ ಡಿಕೆಶಿ ನಿಗಮ ಮಂಡಳಿ ಅಥವಾ ವಿಧಾನಪರಿಷತ್ತಿಗೆ ನಾಮ ನಿರ್ದೇಶನ, ಕೆಪಿಸಿಸಿಯಲ್ಲಿ ಒಳ್ಳೆಯ ಸ್ಥಾನಮಾನ ನೀಡುತ್ತಾರೆ ಎಂದು ಸಿರಾಜ್ ಬೆಂಬಲಿಗರು ಮಾತನಾಡಿಕೊಳ್ಳುತ್ತಿದ್ದಾರೆ. ಒಳ್ಳೆಯ ಸ್ಥಾನ ಸಿಕ್ಕರೆ ಈ ಭಾಗದಲ್ಲಿ ಪಕ್ಷ ಬಲವರ್ಧನೆ ಹಾಗೂ ಅಭಿವೃದ್ಧಿಯ ಕೆಲಸ ಕಾರ್ಯಗಳು ನಡೆಯುವುದರಲ್ಲಿ ಎರಡು ಮಾತಿಲ್ಲ. ಸಿದ್ದರಾಮಯ್ಯ ಅವಧಿಯಲ್ಲಿ ಅವರ ಆಪ್ತರಾಗಿರುವ ಮಾಜಿ ಶಾಸಕ ಎಸ್ ಭೀಮ ನಾಯ್ಕ್ ಸರ್ಕಾರದ ಪವರ್ ಉಪಯೋಗಿಸಿಕೊಂಡು ಅಧಿಕಾರಿಗಳ ವರ್ಗಾವಣೆ ಸೇರಿದಂತೆ ಇಡೀ ವಿಜಯನಗರ ಜಿಲ್ಲೆಯನ್ನು ತಮ್ಮ ಹತೋಟಿಯಲ್ಲಿ ಇಟ್ಟುಕೊಂಡಿದ್ದರು . ಇದರಿಂದ ಹೊಸಪೇಟೆಯ ಕಾಂಗ್ರೆಸ್ ಶಾಸಕ ಗವಿಯಪ್ಪ ಸರ್ಕಾರದ ವಿರುದ್ಧ ಮುನಿಸಿಕೊಂಡಿದ್ದರು. ಈಗ ಮುಖ್ಯಮಂತ್ರಿ ಬದಲಾಗಿದ್ದಾರೆ. ವ್ಯವಸ್ಥೆ ಬದಲಾಗುತ್ತಿದೆಯೇ ಎಂಬುದು ಕಾದ ನೋಡಬೇಕು.




























