
ಸಂಜೆವಾಣಿ ವಾರ್ತೆ
ಚಾಮರಾಜನಗರ, ಸೆ.29:- ಕೇಂದ್ರ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಕೂಡಲೇ ಬಂಧಿಸಬೇಕೆಂದು ಒತ್ತಾಯಿಸಿ ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜೆ. ಯೋಗೇಶ್ ನೇತೃತ್ವದಲ್ಲಿ ಸಮಾವೇಶಗೊಂಡ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿ ರಸ್ತೆ ಮಾರ್ಗವಾಗಿ ಜಿಲ್ಲಾಡಳಿತ ಭವನದ ಮುಂಭಾಗಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿ, ಚುನಾವಣಾ ಆಯುಕ್ತರು ಹಾಗೂ ಕೇಂದ್ರ ಸಚಿವ ಅಮಿತ್ ಶಾ ಪ್ರತಿಕೃತಿ ದಹಿಸಲು ಮುಂದಾದರು. ಇದನ್ನು ತಡೆಯಲು ಮುಂದಾದ ಪೆÇಲೀಸರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಕೆಲಸ ತಳ್ಳಾಟ, ನೂಕಾಟ ನಡೆಯಿತು. ಪ್ರತಿಕೃತಿಯನ್ನು ಬೆಂಕಿ ಹಚ್ಚುವುದನ್ನು ಪೊಲೀಸರು ವಿಫಲಗೊಳಿಸಿ ವಶಕ್ಕೆ ಪಡೆದುಕೊಂಡರು ಪ್ರತಿಭಟನಾನಿರತರು ನಡುವೆ ತಳ್ಳಾಟ, ನೂಕಾಟ ಉಂಟಾಯಿತು. ಪ್ರತಿಕೃತಿ ಪೆÇಲೀಸರ ವಶವಾಯಿತು. ಬಳಿಕ ಜಿಲ್ಲಾಡಳಿತ ಭವನಕ್ಕೆ ಭವನಕ್ಕೆ ತೆರಳಿ ಅಪರ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜೆ.ಯೋಗೇಶ್ ಮಾತನಾಡಿ, ರಾಜ್ಯದಲ್ಲಿ 70 ಸಾವಿರ ಮತದಾರರ ಹಕ್ಕು ರದ್ದತಿಗೆ ಕಾರಣರಾಗಿರುವ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದರು.
ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿ ಅವರ ಆದೇಶದಂತೆ. ದೇಶಾದ್ಯಂತ, ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ.ಹರಿಪ್ರಸಾದ್ ಅವರ ಸೂಚನೆಯಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. ಅದರಂತೆ ಚಾಮರಾಜನಗರ ಜಿಲ್ಲೆಯಲ್ಲೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ಕುಮಾರ್ ಅವರ ತೀರ್ಮಾನದಂತೆ ಎಸ್ಐಆರ್ನಲ್ಲಿ ಸಾಕಷ್ಟು ಅವ್ಯವಹಾರ ಆಗಿದೆ. ರಾಜ್ಯದಲ್ಲಿ 70 ಲಕ್ಷಕ್ಕೂ ಮತದಾರರು ಅನ್ಯಾಯಕ್ಕೊಳಗಾಗಿದ್ದು, ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರು ಸಂವಿಧಾನದಡಿಯಲ್ಲಿ ನೀಡಿದ ಮತದಾನದ ಹಕ್ಕನ್ನು ಕಳೆದುಕೊಂಡಿದ್ದಾರೆ. ಅಲ್ಲದೆ ದೇಶಾದ್ಯಂತ ಅನ್ಯಾಯವಾಗಿದೆ. ಆದರಿಂದ ಕೂಡಲೇ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ಕುಮಾರ್ ಅವರ ರಾಜೀನಾಮೆ ಪಡೆದ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.
ಯುವ ಕಾಂಗ್ರೆಸ್ ಅಧ್ಯಕ್ಷ ಸಿ.ಯೋಗೇಂದ್ರ ಮಾತನಾಡಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ್ ಅವರು ಬಿಜೆಪಿ ಏಜೆಂಟರಂತೆ ವರ್ತಿಸುತ್ತಿದ್ದಾರೆ. ಅಮಿತ್ ಶಾ ಅನತಿಯಂತೆ ಕೆಲಸ ಮಾಡಿರುವ ಅವರನ್ನು ಕೂಡಲೇ ವಜಾಗೊಳಿಸಬೇಕು. ಎಸ್ಐಆರ್ನಲ್ಲಿ ರದ್ದುಪಡಿಸಿರುವ ಲಕ್ಷಾಂತರರ ಮತದಾರರನ್ನು ಮರು ಸೇರ್ಪಡೆ ಮಾಡಬೇಕು.ಜ್ಞಾನೇಶ್ಕುಮಾರ್ ರಾಜೀನಾಮೆ ನೀಡುವವರೆಗೆ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಚುಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕಲವಾಡಿ ಗುರುಸ್ವಾಮಿ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ನಾಗರತ್ನ ಕೆಂಗಾಕಿ, ಯುವ ಕಾಂಗ್ರೆಸ್ ಅಧ್ಯಕ್ಷ ಸಿ.ಯೋಗೇಂದ್ರ, ಚೇತನ್ ದೊರೈರಾಜು, ಬಿಸಲವಾಡಿ ರವಿ, ಯರಗನಹಳ್ಳೀ ಬಸವಣ್ಣ, ಬೂದಂಬಳ್ಳಿ ಶಂಕರ್, ಗೌಡಹಳ್ಳಿ ರಾಜೇಶ್, ಅಕ್ಷಯ್, ಎನ್ ಎಸ್ ಯು ಐ ಜಿಲ್ಲಾಧ್ಯಕ್ಷ ಮೋಹನ್ ನಗು, ಸ್ವಾಮಿ, ದರ್ಶನ್, ಯರಿಯೂರು ಜಯಣ್ಣ, ವಡಗೆರೆ ಮಹದೇವಯ್ಯ, ಡಿ.ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಸಚಿನ್, ಮಂಗಲ ನವೀನ್, ನವೀನ್, ಎಪಿಎಂಪಿ ಮಾಜಿ ಅಧ್ಯಕ್ಷ ಸೋಮೇಶ್, ಶಶಾಂಕ್, ಪ್ರಸಾದ್, ಆನಂತ್, ಸೋಮಣ್ಣ, ರವಿಗೌಡ, ಶಕುಂತಲಾ, ಕಲಾವತಿ, ಕುಮಾರ್ ಮೊದಲಾದವರು ಇದ್ದರು.


























