
ಸಂಜೆವಾಣಿ ವಾರ್ತೆ
ಬಳ್ಳಾರಿ, ಜೂ.11: ಬಳ್ಳಾರಿಯ ರಾವ್ ಬಹದ್ದೂರ್ ವೈ. ಮಹಾಬಲೇಶ್ವರಪ್ಪ ಎಂಜಿನಿಯರಿಂಗ್ ಕಾಲೇಜಿನ ಕಂಪ್ಯೂಟರ್ ಸೈನ್ ಮತ್ತು ಎಂಜಿನಿಯರಿಂಗ್ ವಿಭಾಗದ ವತಿಯಿಂದ 06-06-2026 ರಂದು ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗಾಗಿ ಮೈಕ್ರೋಕಂಟ್ರೋಲರ್ ಆಧಾರಿತ ಮಿನಿ ವ್ರಾಜೆಕ್ಟ್ ಪ್ರದರ್ಶನವನ್ನು ಆಯೋಜಿಸಲಾಯಿತು.
ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮೈಕ್ರೋಕಂಟ್ರೋಲರ್ ತಂತ್ರಜ್ಞಾನವನ್ನು ಬಳಸಿಕೊಂಡು ವಿನೂತನ ಹಾಗೂ ಪ್ರಾಯೋಗಿಕ ಪ್ರಾಜೆಕ್ಟ್ಗಳನ್ನು ಪ್ರದರ್ಶಿಸಿದರು. ವಿದ್ಯಾರ್ಥಿಗಳ ತಾಂತ್ರಿಕ ಜ್ಞಾನ, ಸ್ವಜನಶೀಲತೆ ಹಾಗೂ ಸಮಸ್ಯೆ ಪರಿಹಾರ ಕೌಶಲ್ಯಗಳನ್ನು ವೃದ್ಧಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದ ತೀರ್ಪುಗಾರರಾಗಿ ಎಂ.ಟೆಕ್ ಸಂಯೋಜಕರಾದ ಡಾ. ಸ್ವಪ್ನ ಕುಲಕರ್ಣಿ ಹಾಗೂ ಡಾ. ಪಂಪಾಪತಿ ಅವರು ಭಾಗವಹಿಸಿ ವಿದ್ಯಾರ್ಥಿಗಳ ಪ್ರಾಜೆಕ್ಟ್ಗಳನ್ನು ಮೌಲ್ಯಮಾಪನ ಮಾಡಿದರು. ಅವರು ವಿದ್ಯಾರ್ಥಿಗಳ ಪ್ರಾಜೆಕ್ಟ್ಗಳಲ್ಲಿನ ಹೊಸತನ ಮತ್ತು ತಾಂತ್ರಿಕ ಅಂಶಗಳನ್ನು ಪ್ರಶಂಸಿಸಿ, ಭವಿಷ್ಯದಲ್ಲಿ ಇನ್ನಷ್ಟು ಸಂಶೋಧನಾ ಮನೋಭಾವವನ್ನು ಬೆಳೆಸಿಕೊಳ್ಳುವಂತೆ ಸಲಹೆ ನೀಡಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಮಹಾಬಲೇಶ್ವರಪ್ಪ ಅವರು ವಿದ್ಯಾ ರ್ಥಿಗಳಿಗೆ ಶುಭ ಹಾರೈಸಿ, ಇಂತಹ ಕಾರ್ಯಕ್ರಮಗಳು ವಿದ್ಯಾ ರ್ಥಿಗಳಲ್ಲಿ ತಾಂತ್ರಿಕ ಕೌಶಲ್ಯ ಮತ್ತದ ಆತ್ಮವಿಶ್ವಾಸವನ್ನು ಹೆಚ್ಚಿಸುತ್ತವೆ ಎಂದು ತಿಳಿಸಿದರು.
ವಿಭಾಗದ ಮುಖ್ಯಸ್ಥರಾದ ಡಾ. ಗಿರೀಶ ಎಚ್. ಅವರು ವಿದ್ಯಾರ್ಥಿಗಳ ಶ್ರಮವನ್ನು ಶ್ಲಾಘಿಸಿ, ತಂತ್ರಜ್ಞಾನ ಕ್ಷೇತ್ರದಲ್ಲಿ ನಿರಂತರ ಕಲಿಕೆ ಮತ್ತು ನವೀನತೆಯ ಮಹತ್ವವನ್ನು ಒತ್ತಿಹೇಳಿದರು.
ಕಾರ್ಯಕ್ರಮದ ಸಂಚಾಲಕರಾದ ಶ್ರೀಮತಿ ಸುನಿತಾ ಎಸ್. ಅವರು ಕಾರ್ಯಕ್ರಮವನ್ನು ಯಶಸ್ವಿಯಾಗಿ ಸಂಘಟಿಸಿ, ವಿದ್ಯಾ ರ್ಥಿಗಳು ಹಾಗೂ ಸಿಬ್ಬಂದಿಯ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಆದ್ದಾ ಪಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಸದಸ್ಯರು ಭಾಗವಹಿಸಿ ಪ್ರದರ್ಶಿಸಲಾದ ಪ್ರಾಜೆಕ್ಟ್ಗಳನ್ನು ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
























