
ಸಂಜೆವಾಣಿ ನ್ಯೂಸ್
ಮೈಸೂರು: ಜು.22:- ರಾಜ್ಯ ಸರ್ಕಾರ ಮೈಸೂರಿನಲ್ಲಿ ಸರ್ಕಾರಿ ಕಾರ್ಯಕ್ರಮ ಎಂದು ಹೇಳಿಕೊಂಡು ಶಕ್ತಿ ಪ್ರದರ್ಶನದ ಸಮಾವೇಶ ಮಾಡುವ ಮೂಲಕ ಬ್ಲಾಕ್ ಮೇಲ್ ಸಮಾವೇಶ ಮಾಡಿದೆ. ಪ್ರಧಾನಿ ಮೋದಿ ವಿರುದ್ಧ ಮಾತನಾಡಲು ಈ ಕಾರ್ಯಕ್ರಮ ಆಯೋಜಿಸಿ ಶಿಷ್ಟಾಚಾರ ಉಲ್ಲಂಘಿಸಲಾಗಿದೆ ಎಂದು ಶಾಸಕ ಟಿ.ಎಸ್. ಶ್ರೀವತ್ಸ ಸರ್ಕಾರದ ವಿರುದ್ಧ ಕಿಡಿಕಾರಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕಳೆದ ಎರಡು ದಿನಗಳ ಹಿಂದೆ ನಗರದಲ್ಲಿ ನಡೆದ ಸಮಾವೇಶ ಸರ್ಕಾರದ ಸಾಧÀನಾ ಸಮಾವೇಶವೋ ಅಥವಾ ಪಕ್ಷದ ಸಮಾವೇಶವೋ ಎಂಬುದನ್ನು ಮುಖ್ಯಮಂತ್ರಿಗಳು ಬಹಿರಂಗಪಡಿಸಬೇಕು. ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಮೈಸೂರು ಜಿಲ್ಲೆಗೆ ಸಂಬಂಧÀಪಡದ ಮಲ್ಲಿಕಾರ್ಜುನ ಖರ್ಗೆ, ರಣದೀಪ್ ಸಿಂಗ್ ಸುರ್ಜೇವಾಲ ಅವರ ಹೆಸರು ಹಾಕಿಸಿದ್ದಾರೆ. ಆದರೆ, ಮಾಜಿ ಪ್ರಧಾನಿ ಹಾಗೂ ಹಿರಿಯ ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಅವರ ಹೆಸರೇಕೆ ಹಾಕಿಲ್ಲ ಎಂದು ಪ್ರಶ್ನಿಸಿದರು.
ಕಾರ್ಯಕ್ರಮ ಆಹ್ವಾನ ಪತ್ರಿಕೆಯಲ್ಲಿ ಶಿಷ್ಟಾಚಾರ ಉಲ್ಲಂಘನೆಯಾಗಿದೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೊರತುಪಡಿಸಿ ರಾಜ್ಯದ ಯಾರೊಬ್ಬರ ಹೆಸರನ್ನೂ ಹಾಕಿಲ್ಲ. ಸರ್ಕಾರಿ ಕಾರ್ಯಕ್ರಮ ಎಂದು ಹೇಳಿಕೊಂಡು ಶಕ್ತಿ ಪ್ರದರ್ಶನ ಸಮಾವೇಶ ಮಾಡಲಾಗಿದೆ. ಈ ಸಾಆÀನಾ ಸಮಾವೇಶಕ್ಕೂ ಸುರ್ಜೇವಾಲಗೂ ಏನು ಸಂಬಂಧ ಎಂದು ಕಿಡಿಕಾರಿದರು.
ಇಡೀ ಸಮಾವೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ತೆಗಳುವ ಕಾರ್ಯಕ್ರಮ ಮಾಡಿದ್ದಾರೆ. ದೇಶಕ್ಕೆ, ರಾಜ್ಯಕ್ಕೆ ಮೋದಿ ಕೊಡುಗೆ ಏನು ಎಂದು ಪ್ರಶ್ನಿಸಿದ್ದಾರೆ. ಮೈಸೂರು ಜಿಲ್ಲೆಗೆ ಕೇಂದ್ರ ಸರ್ಕಾರ ರಾಷ್ಟ್ರೀಯ ಹೆz್ದÁರಿ ಕಾಮಗಾರಿಗೆಂದೇ 2627 ಕೋಟಿ ಅನುದಾನ ಕೊಟ್ಟಿದೆ. ಮೈಸೂರಿನಲ್ಲಿ ರೈಲ್ವೆ ಕೆಳ ಸೇತುವೆ ನಿರ್ಮಾಣಕ್ಕೆ 170 ಕೋಟಿ ರೂ ಅನುದಾನ ಕೊಟ್ಟಿದೆ. ಜಲಜೀವನ್ ಮಿಷನ್ ಯೋಜನೆಯಡಿ ಮೈಸೂರಿಗೆ 1393 ಕೋಟಿ ರೂ. ಅನುದಾನ ನಿಡಿದೆ. ಇದ್ಯಾವುದನ್ನೂ ಸ್ಮರಿಸದೇ ಸಾಧÀನಾ ಸಮಾವೇಶ ಮಾಡಿz್ದÁರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ಮುದ್ರಾ ಯೋಜನೆಯಡಿಯಲ್ಲಿ ಮೈಸೂರು ಜಿ¯್ಲÉಗೆ 3 ಸಾವಿರ ಕೋಟಿಗೂ ಅಧಿಕ ಅನುದಾನ ಸಿಕ್ಕಿದೆ. ವಿಶ್ವಕರ್ಮ ಯೋಜನೆಯಲ್ಲಿ 6 ಸಾವಿರ ಮಂದಿಗೆ ತರಬೇತಿ ನೀಡಲಾಗುತ್ತಿದೆ. ಮುದ್ರಾ ಯೋಜನೆಯಲ್ಲಿ ಮೈಸೂರು ಜಿ¯್ಲÉಯಾದ್ಯಂತ 5,38,000 ಫಲಾನುಭÀವಿಗಳಿz್ದÁರೆ.
ಈ ಯೋಜನೆಯಡಿ ಇದುವರೆಗೂ 10 ಸಾವಿರ ಕೋಟಿಗೂ ಹೆಚ್ಚಿನ ಅನುದಾನ ನೀಡಲಾಗಿದೆ. ಅದರೂ ಮೈಸೂರು ಜಿ¯್ಲÉಗೆ ಕೇಂದ್ರ ಏನನ್ನೂ ಕೊಟ್ಟಿಲ್ಲ ಎಂದು ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳಿದ್ದಾರೆ ಎಂದರು.
ಭಿನ್ನಾಭಿಪ್ರಾಯ ಬಹಿರಂಗವಾಗಿದ್ದೇ ಸಾಧÀನೆಯಾ:
ಸಾಧÀನಾ ಸಮಾವೇಶ ಮಾಡಲು ಬಂದು ನಿಮ್ಮ ಭಿನ್ನಾಭಿಪ್ರಾಯ ಬಹಿರಂಗಪಡಿಸಿಕೊಂಡಿದ್ದೇ ಸಾಧÀನೆಯಾ? ಡಿಸಿಎಂ ಡಿ.ಕೆ.ಶಿವಕುಮಾರ್ ತಮಗೆ ಹೇಳಿ ಹೋಗಿದ್ದರೂ ಸೌಜನ್ಯಕ್ಕಾದರೂ ಅವರ ಹೆಸರು ಹೇಳಬಹುದಿತ್ತು. ಆದರೂ ಯಾರೋ ಹಿಂದಿನಿಂದ ಬಂದು ಹೇಳಿದಾಗ ನೀವು ನಡೆದುಕೊಂಡ ರೀತಿ ಸರೀಯೇ? ಸಾಧÀನಾ ಸಮಾವೇಶದ ನೆಪದಲ್ಲಿ ಬಲ ಪ್ರದರ್ಶನ ಮಾಡಿದ್ದೀರ. ಸಮಾವೇಶದಲ್ಲಿ ಪರಸ್ಪರ ವಿಶ್ವಾಸದ ಕೊರತೆ ತೋರಿಸಿದ್ದೀರಿ. ಒಟ್ಟಾರೆ ಸಿದ್ದರಾಮಯ್ಯರ ಭಾಷಣ ಗಮನಿಸಿದರೆ ಅಧಿಕಾರ ಹಸ್ತಾಂತರ ಮಾಡುವ ಸಂದರ್ಭದಲ್ಲಿ ಚುನಾವಣೆಗೆ ಹೋಗುವ ಹುನ್ನಾರ ನಡೆಸಿz್ದÁರೇನೊ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ತೆರಿಗೆದಾರರ ಹಣದಲ್ಲಿ ಸಮಾವೇಶ ಮಾಡಿ ಜನರ ಹಣ ಪೆÇೀಲು ಮಾಡಿz್ದÁರೆ. ಈ ಬಗ್ಗೆ ಮುಂಬರುವ ಅಧಿವೇಶನದಲ್ಲಿ ಚರ್ಚೆ ನಡೆಸಲಾಗುವುದು ಎಂದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ನಗರಾಧÀ್ಯಕ್ಷ ಎಲ್.ನಾಗೇಂದ್ರ, ಮಾಜಿ ಮೇಯರ್ ಶಿವಕುಮಾರ್, ಮಾಧÀ್ಯಮ ವಕ್ತಾರ ಮೋಹನ್, ಮಹೇಶ್ ರಾಜೇ ಅರಸ್ ಇದ್ದರು.