Home ಜಿಲ್ಲೆ ಮೈಸೂರು ಯುವನಿಧಿ ನಿರುದ್ಯೋಗಿ ಯುವಜನತೆಗೆ ಆಸರೆ: ಶಿವಕುಮಾರ್

ಯುವನಿಧಿ ನಿರುದ್ಯೋಗಿ ಯುವಜನತೆಗೆ ಆಸರೆ: ಶಿವಕುಮಾರ್

ಸಂಜೆವಾಣಿ ನ್ಯೂಸ್
ಮೈಸೂರು.ಆ.05:
ನಮ್ಮ ರಾಜ್ಯ ಸರ್ಕಾರವು ಬಡವರ, ಶ್ರಮಿಕರ ಮತ್ತು ಮಧ್ಯಮ ವರ್ಗದ ಜನರ ಆರ್ಥಿಕ ಸ್ವಾವಲಂಬನೆಗಾಗಿ ಐದು ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಪ್ರತಿಯೊಂದು ಕುಟುಂಬದ ದೈನಂದಿನ ಜೀವನೋಪಾಯಕ್ಕೆ ನೆರವಾಗುವುದು ಈ ಯೋಜನೆಗಳ ಮುಖ್ಯ ಉದ್ದೇಶವಾಗಿದ್ದು, ನಿರುದ್ಯೋಗಿ ಯುವಜನತೆಗೆ ಆಸರೆಯಾಗಿರುವುದು ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷ ಪೆÇ್ರೀ. ಶಿವಕುಮಾರ್ ಹೇಳಿದರು.


ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಿದ್ದಾರ್ಥ ನಗರದಲ್ಲಿ ಆಯೋಜಿಸಿದ್ದ ಪಂಚ ಗ್ಯಾರಂಟಿ ಯೋಜನೆಯಲ್ಲಿ ಒಂದಾದ ಯುವನಿಧಿ ಕಾರ್ಯಕ್ರಮದ ಪ್ರಚಾರ ಮತ್ತು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.


ನಮ್ಮ ದೇಶದ ನಿಜವಾದ ಶಕ್ತಿ ಎಂದರೆ ಅದು ನಮ್ಮ ಯುವಜನತೆ. ಆದರೆ ಇಂದಿನ ದಿನಗಳಲ್ಲಿ ಪದವಿ ಮುಗಿಸಿದ ತಕ್ಷಣವೇ ಪ್ರತಿಯೊಬ್ಬರಿಗೂ ಉದ್ಯೋಗ ಸಿಗುವುದು ಸುಲಭವಲ್ಲ. ಶಿಕ್ಷಣ ಮುಗಿದು ಕೆಲಸ ಸಿಗುವವರೆಗಿನ ಈ ಮಧ್ಯಂತರ ಅವಧಿಯಲ್ಲಿ ಯುವಕರು ಆರ್ಥಿಕ ಸಂಕಷ್ಟ ಅನುಭವಿಸಬಾರದು ಮತ್ತು ಅವರಲ್ಲಿ ಆತ್ಮವಿಶ್ವಾಸ ಕುಗ್ಗಬಾರದು ಎಂಬ ಉದ್ದೇಶದಿಂದ ರಾಜ್ಯ ಸರ್ಕಾರವು ಈ ಯುವನಿಧಿ ಯೋಜನೆಯನ್ನು ಜಾರಿಗೆ ತಂದಿದೆ. ಯುವನಿಧಿ ಯೋಜನೆ ಪದವಿ ಹಾಗೂ ಡಿಪೆÇ್ಲಮಾ ಮುಗಿಸಿ ಕೆಲಸದ ಹುಡುಕಾಟದಲ್ಲಿರುವ ನಿರುದ್ಯೋಗಿ ಯುವಕ-ಯುವತಿಯರಿಗೆ ಮಾಸಿಕ ಭತ್ಯೆ ನೀಡಿ ಅವರ ಭವಿಷ್ಯದ ದಾರಿಗೆ ಆಸರೆಯಾಗಿದೆ ಎಂದು ತಿಳಿಸಿದರು.
ಈ ಐದು ಗ್ಯಾರಂಟಿ ಯೋಜನೆಗಳು ಕೇವಲ ಸರ್ಕಾರಿ ಕಾರ್ಯಕ್ರಮಗಳಲ್ಲ. ಇವು ಸಾಮಾನ್ಯ ಜನರ ಬದುಕಿಗೆ ಆರ್ಥಿಕ ಭದ್ರತೆ ನೀಡುವ ಪ್ರಮುಖ ಹೆಜ್ಜೆಗಳಾಗಿವೆ. ಕಷ್ಟದಲ್ಲಿದ್ದ ಕುಟುಂಬಗಳಿಗೆ ಬೆಂಬಲವಾಗಿ ನಿಂತು, ರಾಜ್ಯದ ಆರ್ಥಿಕತೆಯನ್ನು ಕೆಳಗಿನ ಹಂತದಿಂದ ಬೆಳೆಸಲು ಇವು ನೆರವಾಗುತ್ತಿವೆ ಎಂದು ಹೇಳಿದರು.


ಯೋಜನೆಯ ವಿವರ ನೀಡಿದ ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಉಪಾಧ್ಯಕ್ಷರಾದ ಹುಣಸೂರು ಬಸವಣ್ಣ ಅವರು, ಯುವನಿಧಿ ಯೋಜನೆಯಡಿಯಲ್ಲಿ ಪದವಿ ಪೂರ್ಣಗೊಳಿಸಿ ನಿರುದ್ಯೋಗಿಗಳಾಗಿರುವ ಯುವಕ-ಯುವತಿಯರಿಗೆ ಪ್ರತಿ ತಿಂಗಳು 3,000 ರೂಪಾಯಿ ಹಾಗೂ ಡಿಪೆÇ್ಲಮಾ ಪೂರ್ಣಗೊಳಿಸಿದವರಿಗೆ ಪ್ರತಿ ತಿಂಗಳು 1,500 ರೂಪಾಯಿ ನಿರುದ್ಯೋಗ ಭತ್ಯೆಯನ್ನು ನೀಡಲಾಗುತ್ತದೆ. ಈ ಸಹಾಯಧನವನ್ನು ಉದ್ಯೋಗ ಸಿಗುವವರೆಗೆ ಅಥವಾ ಗರಿಷ್ಠ 2 ವರ್ಷಗಳ ಅವಧಿಯವರೆಗೆ ನೇರವಾಗಿ ಅವರ ಬ್ಯಾಂಕ್ ಖಾತೆಗೆ ಡಿಬಿಟಿ ಮೂಲಕ ವರ್ಗಾಯಿಸಲಾಗುತ್ತದೆ ಎಂದು ಹೇಳಿದರು.


ಈ ಹಣವು ಯುವಕರಿಗೆ ಮುಂದಿನ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸಲು, ತರಬೇತಿ ಪಡೆಯಲು ಹಾಗೂ ಕೆಲಸ ಹುಡುಕಲು ಆತ್ಮನಿರ್ಭರತೆಗೆ ಆಸರೆಯಾಗಿದೆ ಎಂದು ತಿಳಿಸಿದರು.
ಯುವನಿಧಿ ಎನ್ನುವುದು ಕೇವಲ ನಿರುದ್ಯೋಗ ಭತ್ಯೆಯಲ್ಲ. ಇದು ಯುವಕರು ತಮ್ಮ ಕಾಲಮೇಲೆ ತಾವು ನಿಲ್ಲಲು ಸರ್ಕಾರ ನೀಡುತ್ತಿರುವ ಒಂದು ಸಣ್ಣ ಪೆÇ್ರೀತ್ಸಾಹ. ಯುವಜನತೆ ಈ ಹಣವನ್ನು ಸದುಪಯೋಗಪಡಿಸಿಕೊಂಡು, ತಮ್ಮ ಕೌಶಲ್ಯಗಳನ್ನು ಬೆಳೆಸಿಕೊಂಡು, ಉತ್ತಮ ಉದ್ಯೋಗವನ್ನು ಕಂಡುಕೊಳ್ಳಬೇಕು ಎಂದು ಹೇಳಿದರು.
ಯುವ ನಿಧಿ ಪ್ಲಸ್ ಬಗ್ಗೆ ಮಾತನಾಡಿದ ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾದ ಸಾ. ಮಾ. ಯೋಗೇಶ್ ಅವರು, ಯುವ ನಿಧಿ ಪ್ಲಸ್ ಕೇವಲ ಹಣಕಾಸಿನ ನೆರವಲ್ಲ. ಉದ್ಯೋಗಕ್ಕೆ ಬೇಕಾದ ಉನ್ನತ ಕೌಶಲ್ಯ ತರಬೇತಿ ನೀಡುವ ಮಹತ್ತರ ಉದ್ದೇಶವನ್ನು ಹೊಂದಿದೆ. ಪದವಿ ಪೂರ್ಣಗೊಳಿಸಿ ಉದ್ಯೋಗವಿಲ್ಲದೆ ಕಾಯುತ್ತಿರುವ ಯುವಕರಿಗೆ ಗರಿಷ್ಠ 2 ವರ್ಷಗಳ ಕಾಲ ಅಥವಾ ಉದ್ಯೋಗ ಸಿಗುವವರೆಗೆ ಯುವನಿಧಿ ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.


ಅದರೊಂದಿಗೆ ಉಚಿತ ಕೌಶಲ್ಯ ತರಬೇತಿಯನ್ನು ಯುವ ನಿಧಿ ಪ್ಲಸ್ ಅಡಿಯಲ್ಲಿ ಕೃತಕ ಬುದ್ಧಿಮತ್ತೆ, ಸೈಬರ್ ಸೆಕ್ಯುರಿಟಿ, ಎಲೆಕ್ಟ್ರಿಕ್ ವೆಹಿಕಲ್ ತಂತ್ರಜ್ಞಾನ, ಸಿಎನ್‍ಸಿ ಮೆಷಿನ್ ತರಬೇತಿಯಂತಹ ಆಧುನಿಕ ಮಾರುಕಟ್ಟೆಗೆ ಅಗತ್ಯವಿರುವ ಉಚಿತ ಕೌಶಲ್ಯ ತರಬೇತಿಯನ್ನು ಕೆಜಿಟಿಐ, ಜಿಟಿಸಿ ಹಾಗೂ ಐಟಿಐ ಸಂಸ್ಥೆಗಳ ಮೂಲಕ ನೀಡಲಾಗುತ್ತದೆ ಎಂದರು.
ಯುವಕರು ಕೇವಲ ಕೆಲಸ ಹುಡುಕುವವರು ಆಗದೆ, ತಾವೇ ಸ್ವಂತ ಉದ್ಯಮ ಪ್ರಾರಂಭಿಸಿ ಕೆಲಸ ಕೊಡುವವರು ಆಗಲು ಬೇಕಾದ ತರಬೇತಿ ಹಾಗೂ ಮಾರ್ಗದರ್ಶನವನ್ನು ಈ ಯೋಜನೆ ನೀಡುತ್ತದೆ ಎಂದು ತಿಳಿಸಿದರು.


ಯುವಕರು ಉದ್ಯೋಗವಿಲ್ಲದಿದ್ದಾಗ ನಿರಾಶರಾಗುವ ಅಗತ್ಯವಿಲ್ಲ. ಸರ್ಕಾರದ ಈ ಯುವ ನಿಧಿ ಪ್ಲಸ್ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು, ಕೌಶಲ್ಯ ಕರ್ನಾಟಕ ಪೆÇೀರ್ಟಲ್‍ನಲ್ಲಿ ನೋಂದಾಯಿಸಿಕೊಂಡು ಹೊಸ ತಂತ್ರಜ್ಞಾನಗಳನ್ನು ಕಲಿಯಿರಿ. ನಿಮ್ಮ ಕೌಶಲ್ಯ ಹೆಚ್ಚಿಸಿಕೊಂಡರೆ ಉದ್ಯೋಗಾವಕಾಶಗಳು ತಾವಾಗಿಯೇ ನಿಮ್ಮನ್ನು ಹುಡುಕಿಕೊಂಡು ಬರುತ್ತವೆ ಎಂದು ಹೇಳಿದರು.


ಕಾರ್ಯಕ್ರಮದಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರಾದ ಮಂಜುನಾಥ ಕೆ.ಡಿ, ಸರ್ಕಾರಿ ಪ್ರಥಮ ದರ್ಜೆ ಸಿದ್ದಾರ್ಥ ನಗರ ಕಾಲೇಜಿನ ಪ್ರಾಂಶುಪಾಲರಾದ ನರಸಿಂಹಮೂರ್ತಿ, ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾದ ಅಬ್ದುಲ್ ಖಾದರ್, ಕುಮಾರಿ ಲಲಿತಾ ಹಾಗೂ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ವಿರೇಂದ್ರ ಉರುಫ್ ನವೀನ್ ಉಪಸ್ಥಿತರಿದ್ದರು.