Home ಜಿಲ್ಲೆ ಮೈಸೂರು ರಾಜ್ಯದಾಡ್ಯಂತ್ತ ಬರಪೀಡಿತ ಪ್ರದೇಶಗಳಿಗೆ ಸಚಿವರ ಭೇಟಿ

ರಾಜ್ಯದಾಡ್ಯಂತ್ತ ಬರಪೀಡಿತ ಪ್ರದೇಶಗಳಿಗೆ ಸಚಿವರ ಭೇಟಿ

ಸಂಜೆವಾಣಿ ವಾರ್ತೆ
ಪಿರಿಯಾಪಟ್ಟಣ: ಆ.08:
ರಾಜ್ಯದಾಡ್ಯಂತ್ತ ಬರಪೀಡಿತ ಪ್ರದೇಶಗಳಿಗೆ ಉಸ್ತುವಾರಿ ಸಚಿವರುಗಳು ಭೇಟಿ ನೀಡುತ್ತಿದ್ದು ವರದಿಯನ್ನು ಸರಕಾರದ ಮುಂದೆ ಮಂಡಿಸಿ ನಂತರ ರೈತರ ಹಿತ ಕಾಪಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.


ತಾಲೂಕಿನ ರಾವಂದೂರು ಗ್ರಾಮದ ಸಮೀಪದ ತಮ್ಮಡಹಳ್ಳಿ ಗ್ರಾಮದಲ್ಲಿ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ರೈತರ ಸಂಕಷ್ಟ ಆಲಿಸಿದ ಅವರು ಅಧಿಕಾರಿಗಳು ಸಾರ್ವಜನಿಕರ ಹಿತವನ್ನು ಕಾಪಾಡುವಲ್ಲಿ ಕೆಲಸ ನಿರ್ವಹಿಸಬೇಕು. ಮಳೆಯ ಅಭಾವದಿಂದಾಗಿ ರಾಜ್ಯದಲ್ಲಿ ಸಾರ್ವಜನಿಕರು ರೈತರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ ಇದನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಸಾರ್ವಜನಿಕರ ಹಿತ ಕಾಯುವ ಕೆಲಸ ಮಾಡಬೇಕು. ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರ ಆದೇಶದಂತೆ ರಾಜ್ಯದಾದ್ಯಂತ ಸಚಿವರುಗಳು ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ರೈತರಿಗೆ ಆಗಿರುವ ನಷ್ಟದ ಬಗ್ಗೆ ವರದಿ ಸಂಗ್ರಹ ಮಾಡುತ್ತಿದ್ದೇವೆ. ಈ ವರದಿಗಳನ್ನು ಸರ್ಕಾರದ ಮುಂದೆ ಮಂಡಿಸಿ ರೈತರಿಗೆ ಸಹಕಾರವಾಗುವ ಯೋಜನೆಗಳನ್ನು ಕೈಗೊಳ್ಳುತ್ತೇವೆ ರೈತರು ಯಾವುದೇ ಸಂದರ್ಭದಲ್ಲಿಯೂ ದೃತಿ ಕೆಡಬಾರದು ಎಂದರು.
ಶಾಸಕ ಕೆ ವೆಂಕಟೇಶ್ ಮಾತನಾಡಿ ತಾಲೂಕಿನ ಜನತೆಗೆ ನೀರಾವರಿ ಸಮಸ್ಯೆ ಬಗೆಹರಿಸಲು 150 ಕೆರೆಗಳಿಗೆ ನೀರು ತುಂಬಿಸುವ ಬಹುದೊಡ್ಡ ಯೋಜನೆಯನ್ನು ಜಾರಿಗೊಳಿಸಲಾಗಿದ್ದು ಕೆರೆಗಳಿಗೆ ನೀರನ್ನು ಹಾಯಿಸುವ ಕೆಲಸವನ್ನು ಅಧಿಕಾರಿಗಳು ಮಾಡಿದ್ದಾರೆ. ತಾಲೂಕಿನಲ್ಲಿ ತಂಬಾಕು ಸೇರಿದಂತೆ ಇನ್ನಿತರೆ ಬೆಳೆಗಳನ್ನು ನಂಬಿ ಬದುಕುತ್ತಿರುವ ರೈತರಿಗೆ ಸರ್ಕಾರವು ಸಾಧ್ಯವಾದಷ್ಟು ಸಹಾಯ ಮಾಡಲಿದೆ ಎಂದರು.


ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಕ ಅಧಿಕಾರಿ ವಿಕೇಶ್ ಕುಮಾರ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ್ ಬಾಲದಂಡೆ ತಾಲೂಕ ಅಧಿಕಾರಿಗಳು ಹಾಜರಿದ್ದರು.