
(ಸಂಜೆವಾಣಿ ವಾರ್ತೆ
ಬಳ್ಳಾರಿ, ಆ.30: ಓಬಳಾಪುರಂ ಮೈನಿಂಗ್ ಕಂಪನಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿರುವ
ಮಾಜಿ ಸಚಿವ ಹಾಗೂ ಗಂಗಾವತಿ ಕ ಶಾಸಕ ಗಾಲಿ ಜನಾರ್ದನ ರೆಡ್ಡಿ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ದೊಡ್ಡ ಅವಮಾನ ಎಂದು ಗಣಿ ಉದ್ಯಮಿ ಟಪಾಲ್ ಗಣೇಶ್ ಹೇಳಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಗಣೇಶ್ ಅವರು. ಜನಾರ್ಧನರೆಡ್ಡಿ ಅವರನ್ನು ಸಿಬಿಐ ವಿಶೇಷ ನ್ಯಾಯಾಲಯವು ತಪ್ಪಿತಸ್ಥರೆಂದು ತೀರ್ಪು ನೀಡಿದೆ. ಕಾನೂನಿನ ಮುಂದೆ ತಪ್ಪಿತಸ್ಥರೆಂದು ಸಾಬೀತಾಗಿರುವ ವ್ಯಕ್ತಿಗೆ ಸಾರ್ವಜನಿಕ ವೇದಿಕೆಯ ಮುಂದೆ ಥವಾ ಮಾಧ್ಯಮಗಳ ಎದುರು ಮಾತನಾಡುವ ಯಾವುದೇ ನೈತಿಕ ಹಕ್ಕು ಇಲ್ಲ.
ಜನರ ಹಣವನ್ನು ಲೂಟಿ ಮಾಡಿ, ಅರಣ್ಯ ಮತ್ತು ನೈಸರ್ಗಿಕ ಸಂಪತ್ತನ್ನು ನಾಶ ಮಾಡಿದ ಪ್ರಕರಣದಲ್ಲಿ ತೀರ್ಪು ಬಂದ ನಂತರವೂ ರಾಜಕೀಯ ನಾಯಕರು ಅವರಿಗೆ ರಕ್ಷಣೆ ನೀಡುವುದು ಮತ್ತು ಪತ್ರಿಕಾಗೋಷ್ಠಿಗಳಲ್ಲಿ ಹೇಳಿಕೆ ನೀಡುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ದೊಡ್ಡ ಅವಮಾನವಾಗಿದೆಂದರು.































