
ಸಂಜೆವಾಣಿ ನ್ಯೂಸ್
ಮೈಸೂರು:ಸೆ.08:- ಚಾಮುಂಡಿ ಬೆಟ್ಟದ ಸಮೀಪದ ಸಕಳ್ಳಿ-ಲಲಿತಾದ್ರಿಪುರ ಮುಖ್ಯ ರಸ್ತೆ ಕಸದ ಡಂಪಿಂಗ್ ಯಾರ್ಡ್ ಆಗಿ ಮಾರ್ಪಟ್ಟಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರ ಮನವಿಗೆ ಸ್ಪಂದಿಸಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ರಸ್ತೆಯಲ್ಲಿ ಹಾರನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಂದ ತಂದು ಎಲ್ಲೆಂದರಲ್ಲಿ ಕಸ ಸುರಿಯಲಾಗುತ್ತಿದೆ ಎಂಬುದು ಗ್ರಾಮಸ್ಥರ ಆರೋಪ. ಈ ಕುರಿತು ಸದ್ಯದಲ್ಲೇ ಅಧಿಕಾರಿಗಳ ಸಭೆ ಕರೆದು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಸ್ಥಳಕ್ಕೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೃಷ್ಣ, ಪಾಲಿಕೆ ಆಯುಕ್ತೆ ಸವಿತಾ ಸೇರಿದಂತೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಸಚಿವರು, ರಸ್ತೆ ಬದಿಯ ಕಸದ ರಾಶಿ ಕಂಡು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಕೂಡಲೇ ಕ್ರಮಕ್ಕೆ ಸೂಚಿಸಿದರು.
ಕಸ ಸುರಿಯುವವರ ವಿರುದ್ಧ ಕಠಿಣ ಕ್ರಮ ಹಾಗೂ ನಿಗಾ ವಹಿಸಲು ಅಅಖಿಗಿ ಅಳವಡಿಸಲಾಗುವುದು. ರಸ್ತೆಯಲ್ಲಿ ಬಿದ್ದಿರುವ ಕಸವನ್ನು ಶೀಘ್ರ ತೆರವುಗೊಳಿಸಲಾಗುವುದು ಎಂದು ಅವರು ಭರವಸೆ ನೀಡಿದರು.
























