Home ಜಿಲ್ಲೆ ವಿಜಯನಗರ: ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ

ವಿಜಯನಗರ: ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣೆ

ಸಂಜೆವಾಣಿ ವಾರ್ತೆ

ಹೊಸಪೇಟೆ.ಸೆ.5 ವಿಜಯನಗರ ಜಿಲ್ಲಾದ್ಯಂತ ಶುಕ್ರವಾರ ಸಡಗರ ಸಂಭ್ರಮದಿಂದ ಶ್ರೀಕೃಷ್ಣ ಜನ್ಮಾಷ್ಠಮಿಯನ್ನು ಆಚರಿಸಲಾಯಿತು.

ಶ್ರೀಕೃಷ್ಣ ಜನ್ಮಾಷ್ಠಮಿ ಅಂಗವಾಗಿ ಸ್ಥಳೀಯ ಪಟೇಲ ನಗರದ ಶ್ರೀವೇಣುಗೋಪಾಲಕೃಷ್ಣ ದೇವಸ್ಥಾನ ಸೇರಿದಂತೆ ವಿವಿಧ ದೇವಸ್ಥಾನಗಳಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಜರುಗಿದವು. ನಗರದ ಜಂಬುನಾಥಸ್ವಾಮಿ ದೇವಸ್ಥಾನದ ರಸ್ತೆಯಲ್ಲಿರುವ ಸಾಧ್ಯ ವಿಶೇಷ ಮಕ್ಕಳ ಶಾಲೆ ಸೇರಿದಂತೆ ಜಿಲ್ಲಾಧ್ಯಂತ ವಿವಿಧ ಸರ್ಕಾರಿ ಹಾಗೂ ಖಾಸಗಿ ಶಾಲೆಗಳಲ್ಲಿ ಜರುಗಿದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮಕ್ಕಳು ಶ್ರೀಕೃಷ್ಣನ ವೇಷ ಧರಿಸಿ, ರಂಜಿಸಿದರು.

ಶ್ರೀಕೃಷ್ಣ ಜನ್ಮಾಷ್ಠಮಿ ಅಂಗವಾಗಿ ಮನೆ ಮನೆಗಳಲ್ಲಿ ಪೋಷಕರು ತಮ್ಮ ಪುಟ್ಟ ಪುಟ್ಟ ಮಕ್ಕಳಿಗೆ ಶ್ರೀಕೃಷ್ಣನ ವೇಷ ತೊಡಿಸಿ, ಮಕ್ಕಳೊಂದಿಗೆ ತಂದೆ, ತಾಯಿಗಳು ಹಾಗೂ ಪೋಷಕರು ಸಂಭ್ರಮಿಸಿದರು.