ವಿದ್ಯಾರ್ಥಿಗಳು ನಾವಿನ್ಯತೆ, ಕ್ರಿಯಾಶೀಲತೆಗೆ ಒತ್ತುಕೊಡಿ

ಸಂಜೆವಾಣಿ ನ್ಯೂಸ್
ಮೈಸೂರು: ಸೆ.03:-
ಶಿಕ್ಷಣದ ಕಲಿಕೆ ಜತೆಗೆ ಕೌಶಲ್ಯ ಕೂಡಿದರೆ ಇನ್ನಷ್ಟು ಪ್ರಗತಿ ಸಾಧಿಸಬಹುದು. ವಿದ್ಯಾರ್ಥಿಗಳು ವೈಫಲ್ಯಕ್ಕೆ ಹೆದರದೆ ನಾವಿನ್ಯತೆ, ಕ್ರಿಯಾಶೀಲತೆಗೆ ಹೆಚ್ಚು ಒತ್ತು ನೀಡಬೇಕು ಎಂದು ಕರ್ನಾಟಕ ಕೌಶಲ್ಯಾಭಿವೃದ್ದಿ ಮಂಡಳಿಯ ಅಧ್ಯಕ್ಷೆ ಕಾಂತಾ ನಾಯಕ್ ಹೇಳಿದರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕಾವೇರಿ ಸಭಾಂಗಣದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ 45 ದಿನಗಳ ಕಾಲ ಆಯೋಜಿಸಲಾಗಿದ್ದ ಕೆ-ಸೆಟ್ ಮತ್ತು ಯುಜಿಸಿ ನೆಟ್ ಪರೀಕ್ಷಾ ತರಬೇತಿ ಶಿಬಿರದ ಸಮಾರೋಪ ಸಮಾರಂಭÀದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೌಶಲ್ಯ ಮಹತ್ವವಾದುದ್ದು, ಅದು ಯಾವುದಾದರೂ ಸರಿಯೇ, ನಿಮ್ಮ ಆಸಕ್ತಿ ಮತ್ತು ಅಭಿರುಚಿಗೆ ಅನುಗುಣವಾಗಿ ಅಗತ್ಯ ಕೌಶಲ್ಯಗಳನ್ನು ಪಡೆದು ಗುರಿ ಮುಟ್ಟಬೇಕು ಎಂದು ಶಿಬಿರಾರ್ಥಿಗಳಿಗೆ ಸಲಹೆ ನೀಡಿದರು.

ಶಿಕ್ಷಣ ವ್ಯವಸ್ಥೆಯಲ್ಲಿ ಉದ್ಯೋಗಕ್ಕೆ ಅಗತ್ಯವಾದ ತರಬೇತಿ ನೀಡಲು ಸರ್ಕಾರÀ, ಕೈಗಾರಿಕೆ ಮತ್ತು ಶಿಕ್ಷಣ ತಜ್ಞರ ನಡುವೆ ಚರ್ಚೆಗಳಾಗಿ ನೂತನ ಯೋಜನೆಗಳು ಅನುಷ್ಠಾನಗೊಂಡಿವೆ. ಈ ಮೂಲಕ ಕ್ಯಾಂಪಸ್ ನೇರ ನೇಮಕಾತಿಗಳಲ್ಲಿ ಕೌಶಲ್ಯವಿರುವ ಅಭ್ಯರ್ಥಿಗಳಿಗೆ ಉದ್ಯೋಗ ಸಿಗುತ್ತಿದೆ.

ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪೆÇ್ರ.ಲೋಕನಾಥ್ ಮಾತನಾಡಿ, ಇಂದಿನ ಕಾಲಘಟ್ಟದಲ್ಲಿ ತಂತ್ರಜ್ಞಾನ ಜೀವನದ ಅವಿಭಾಜ್ಯ ಅಂಗವಾಗಿದೆ. ಇಂದಿನ ಅಧುನಿಕ ಯುಗಕ್ಕೆ ತಂತ್ರಜ್ಞಾನ ಅತ್ಯಗತ್ಯವಾಗಿದೆ. ತಂತ್ರಜ್ಞಾನದ ಜತೆಗೆ ನಾವು ಸಾಗಬೇಕೆ ವಿನಃ ಅದನ್ನು ವಿರೋಧಿಸಬಾರದು ಎಂದು ಶಿಬಿರಾರ್ಥಿಗಳಿಗೆ ಸಲಹೆ ನೀಡಿದರು.

ಸ್ಪರ್ಧಾತ್ಮಕ ಜಗತ್ತಿಗೆ ಕಾಲಿಡುವವರಲ್ಲಿ ಯುನಿಕ್ನೆಸ್ ಇರಬೇಕು. ಇದರ ಜತೆಗೆ ತಂತ್ರಜ್ಞಾನ ಅಳವಡಿಸಿಕೊಂಡರೆ ನಾವು ಬೇಗ ಗುರಿ ಮುಟ್ಟುತ್ತೇವೆ. ಸ್ಪರ್ಧಾತ್ಮಕ ಯುಗದಲ್ಲಿ ಪ್ರಶ್ನೆ ಪತ್ರಿಕೆ ತಯಾರಿಸುವವರು ತುಂಬಾ ಕಠಿಣವಾದ ಪ್ರಶ್ನೆಗಳನ್ನೆ ಸಿದ್ದಪಡಿಸುತ್ತಾರೆ. ಅದನ್ನು ವಿದ್ಯಾರ್ಥಿಗಳು ಸುಲಭÀವಾಗಿ ಉತ್ತರಿಸುವ ಹಾಗೆ ಸಿದ್ದವಾಗಿರಬೇಕು ಎಂದು ಹೇಳಿದರು.

ವಿಶ್ರಾಂತ ಕುಲಪತಿ ಪೆÇ್ರ.ಲಿಂಗರಾಜ ಗಾಂಧಿ ಮಾತನಾಡಿ, ಕೌಶಲ್ಯವಿಲ್ಲದಿದ್ದರೆ ಯಾವುದೇ ರೀತಿ ಸಬಲೀಕರಣ ಅಭಿವೃದ್ಧಿಯಾಗಲು ಸಾಧ್ಯವಿಲ್ಲ. ಶಿಕ್ಷಣದಲ್ಲಿ ಕೌಶಲ್ಯ ಅತ್ಯಂತ ಪೂರಕವಾದದ್ದು. ಕೌಶಲ್ಯ ಕೇಂದ್ರ ಗ್ರಾಮೀಣ ಭಾಗದಿಂದ ಬಂದ ಯುವಜನರಿಗೆ ಶಿಕ್ಷಣ ಕ್ಷೇತ್ರದಲ್ಲಿ ಸಾಧಿಸುವವರಿಗೆ ಒಂದು ರೀತಿಯ ಆಶಾಕಿರಣ ಹಾಗೂ ಬೆನ್ನೆಲುಬಾಗಿ ನಿಂತಿದೆ. ಶಿಕ್ಷಣದಿಂದ ಮಾತ್ರ ಎಲ್ಲೆ ಮೀರಲು ಸಾಧ್ಯ ಎಂದು ಹೇಳಿದರು.