Home ಜಿಲ್ಲೆ ಮಂಗಳೂರು ವಿದ್ಯಾರ್ಥಿನಿಯರಿಗಾಗಿ ಇನ್ನೂ ಎರಡು ವಸತಿ ನಿಲಯ: ಶಿವರಾಜ ತಂಗಡಗಿ

ವಿದ್ಯಾರ್ಥಿನಿಯರಿಗಾಗಿ ಇನ್ನೂ ಎರಡು ವಸತಿ ನಿಲಯ: ಶಿವರಾಜ ತಂಗಡಗಿ

ಉಡುಪಿ:ಅಜ್ಜರಕಾಡಿನ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರಕ್ಕೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ತಂಗಡಗಿ ಭೇಟಿ ನೀಡಿದರು.
ವಿದ್ಯಾರ್ಥಿನಿಯರನ್ನುದ್ದೇಶಿಸಿ ಮಾತನಾಡಿದ ಅವರು, ಕಾಲೇಜಿನ ವಿದ್ಯಾರ್ಥಿನಿಯರಿಗೆ ವಸತಿ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಇನ್ನೂ ಎರಡು ಮಹಿಳಾ ವಸತಿ ನಿಲಯಗಳನ್ನು ನಿರ್ಮಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಮೂರು ಜಿಲ್ಲೆಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಕ್ಯಾಬಿನೆಟ್ ?೩೨,೦೦೦ ಕೋಟಿ ಅನುದಾನ ಮಂಜೂರು ಮಾಡಿದ್ದು, ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ ಎಂದು ಅವರು ಹೇಳಿದರು.
ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ, ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನಿಕೇತನ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ರಾಜೇಂದ್ರ ಕೆ., ಐಕ್ಯೂಎಸಿ ಸಂಚಾಲಕಿ ಪ್ರೊ. ಶ್ರೀಮತಿ ಅಡಿಗ, ಪ್ರಾಧ್ಯಾಪಕರಾದ ಪ್ರೊ. ಪಿ.ಬಿ. ಪ್ರಸನ್ನ, ವಿದ್ಯಾ ಡಿ., ಡಾ. ಮಣಿಭೂಷಣ್ ಡಿಸೋಜ, ಜಯಲಿಂಗ ಮೂರ್ತಿ ಸೇರಿದಂತೆ ಬೋಧಕ-ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.