ವಿದ್ಯಾರ್ಥಿ ಕಾಂಗ್ರೆಸ್ ಸಮಿತಿ ಚುನಾವಣೆ ಆರಂಭ


(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ:
ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ( ಎನ್.ಎಸ್.ಯು.ಐ) ಬಳ್ಳಾರಿ ಜಿಲ್ಲಾ ಸಮಿತಿಗೆ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಗೆ ಇಂದು ಜಿಲ್ಲಾ ಸಮಿತಿ ಕಚೇರಿಯಲ್ಲಿ ಜಿಲ್ಲಾ ಅಧ್ಯಕ್ಷ ಅಲ್ಲಂ‌ಪ್ರಶಾಂತ್ ಚಾಲನೆ ನೀಡಿದ್ದಾರೆ.
ರಾಜ್ಯ ಮಟ್ಟದಲ್ಲಿ ಇದೇ ಮೊಟ್ಟ ಮೊದಲ ಬಾರಿಗೆ ಜಿಲ್ಲಾಧ್ಯಕ್ಷರ ಸ್ಥಾನಕ್ಕೆ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು.
ಈ ಆಯ್ಕೆ ಪ್ರಕ್ರಿಯೆಯು ಜು.16 ರ ವರೆಗೆ ನಡೆಯಲಿದ್ದು ಆಸಕ್ತಿ ಇರುವ ಅಖಂಡ ಬಳ್ಳಾರಿ ಜಿಲ್ಲೆಯ ವಿದ್ಯಾರ್ಥಿಗಳು ಬಳ್ಳಾರಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.