
ಸುಳ್ಯ:ವೈಭವದ ಶೋಭಾಯಾತ್ರೆಯೊಂದಿಗೆ ಹಳೆಗೇಟು ಸಾಂಸ್ಕೃತಿಕ ಸಂಘದ ವತಿಯಿಂದ ನಡೆದ ೪೩ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಪನ್ನಗೊಂಡಿತು.
ಸಾಂಸ್ಕೃತಿಕ ಸಂಘದ ವಸಂತಕಟ್ಟೆಯಲ್ಲಿ ಧಾರ್ಮಿಕ, ಸಾಂಸ್ಕೃತಿಕ, ಕಾರ್ಯಕ್ರಮದೊಂದಿಗೆ ಮೂರು ದಿನಗಳ ಕಾಲ ನಡೆದ ಗಣೇಶೋತ್ಸವದ ಕೊನೆಯ ದಿನ ಮಹಾಪೂಜೆ ನಡೆದು ಅನ್ನಪ್ರಸಾದ ಸಂತರ್ಪಣೆ ನಡೆಯಿತು. ಸಂಜೆ ಸುಳ್ಯ ನಗರದಲ್ಲಿ ಗಣೇಶ ವಿಗ್ರಹ ವಿಸರ್ಜನಾ ಶೋಭಾ ಯಾತ್ರೆ ನಡೆಯಿತು. ಶೋಭಾಯಾತ್ರೆಗೆ ಸಿಡಿಮದ್ದು ಪ್ರದರ್ಶನ, ನಾಸಿಕ್ ಬ್ಯಾಂಡ್, ಚೆಂಡೆ ವಾದ್ಯ ಮೇಳಗಳು ಮೆರುಗು ನೀಡಿತು. ಬಳಿಕ ಗಣೇಶ ವಿಗ್ರಹ ಜಲಸ್ತಂಭನಗೊಳಿಸುವುದರೊಂದಿಗೆ ಗಣೇಶೋತ್ಸವ ಸಂಪನ್ನಗೊಂಡಿತು.


































