Home ಜಿಲ್ಲೆ ಶಾಲಾ ಮಕ್ಕಳಿಗೆ ರಸಪ್ರಶ್ನೆ ಕಾರ್ಯಕ್ರಮ

ಶಾಲಾ ಮಕ್ಕಳಿಗೆ ರಸಪ್ರಶ್ನೆ ಕಾರ್ಯಕ್ರಮ


ಹುಬ್ಬಳ್ಳಿ,ನ.೪: ಇಲ್ಲಿನ ಸೇವಾ ಭಾರತಿ ಟ್ರಸ್ಟ್ ಅಂಗ ಸಂಸ್ಥೆಯಾದ ಮಾತೃಛಾಯಾ ಬಾಲಕಲ್ಯಾಣ ಕೇಂದ್ರದ ವತಿಯಿಂದ ಶಾಲಾ ವಿದ್ಯಾರ್ಥಿಗಳಿಗಾಗಿ ರಸಪ್ರಶ್ನೆ ಕಾರ್ಯಕ್ರಮವನ್ನು ಹುಬ್ಬಳ್ಳಿಯ ಎ.ಪಿ.ಎಂ.ಸಿ. ಆವರಣದಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.


ಕಾರ್ಯಕ್ರಮದ ನೇತೃತ್ವ ವಹಿಸಿದ್ದ ಮಾತೃಛಾಯಾ ಬಾಲಕಲ್ಯಾಣ ಕೇಂದ್ರದ ಅಧ್ಯಕ್ಷರಾದ ಶ್ರೀಮತಿ ಕಮಲಾ ಜೋಶಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, “ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಸಾಮಾನ್ಯ ಜ್ಞಾನವೂ ಅತಿ ಮುಖ್ಯ. ಇಂತಹ ರಸಪ್ರಶ್ನೆ ಸ್ಪರ್ಧೆಗಳು ಮಕ್ಕಳಲ್ಲಿ ತಾರ್ಕಿಕ ಆಲೋಚನೆ ಮತ್ತು ಶೀಘ್ರ ನಿರ್ಧಾರ ಕೈಗೊಳ್ಳುವ ಸಾಮರ್ಥ್ಯವನ್ನು ಬೆಳೆಸುತ್ತವೆ. ಮಾತೃಛಾಯಾ ಬಾಲಕಲ್ಯಾಣ ಕೇಂದ್ರವು ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗಾಗಿ ನಿರಂತರವಾಗಿ ಇಂತಹ ಪ್ರೋತ್ಸಾಹದಾಯಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ,” ಎಂದು ತಿಳಿಸಿದರು. ಅವರು ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆಯನ್ನು ಆಕರ್ಷಕವಾಗಿ ನಡೆಸಿಕೊಟ್ಟರು.


ಶಾಲೆಯ ಒಟ್ಟು ೪೦ ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಈ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸ್ಪರ್ಧೆಯಲ್ಲಿ ವಿಜೇತರಾದ ಮಕ್ಕಳಿಗೆ ಸಂಸ್ಥೆಯ ವತಿಯಿಂದ ಆಕ?Àðಕ ಬಹುಮಾನ ಹಾಗೂ ಪ್ರಶಸ್ತಿ ಪತ್ರಗಳನ್ನು ವಿತರಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಪ್ರಮುಖರಾದ ಅನಿತಾ ಬಿಡಿಕರ್, ಆಶಾಚೌದರಿ, ಅನಿತಾ ಪಾಟೀಲ, ನಂದಾ ಸವಡಿ, ಶೈಲಾ ಶೆಟ್ಟರ್ ಹಾಗೂ ಚನ್ನುಹೊಸಮನಿ ಅವರು ಉಪಸ್ಥಿತರಿದ್ದು, ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.