
ಸಂಜೆವಾಣಿ ನ್ಯೂಸ್
ಮೈಸೂರು: ಜೂ.04:- ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಯುವ ಘರ್ಜನೆ ಸಂಘದ ಜಿಲ್ಲಾ ಸಮಿತಿ ವತಿಯಿಂದ ಸಮಾಜ ಸೇವಾ ಕಾರ್ಯದ ಮೂಲಕ ಶಿವಾನಂದ ಪುರಿ ಸ್ವಾಮೀಜಿ ಅವರ ಹುಟ್ಟುಹಬ್ಬ ಆಚರಿಸಲಾಯಿತು.
ಹುಟ್ಟುಹಬ್ಬದ ಪ್ರಯುಕ್ತ ಮೊದಲಿಗೆ ಸಿದ್ಧಿವಿನಾಯಕ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಬಳಿಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ ನೋಟ್ಬುಕ್, ಪೆನ್ನು ಹಾಗೂ ಸಿಹಿ ತಿಂಡಿ ವಿತರಿಸುವ ಮೂಲಕ ಹುಟ್ಟುಹಬ್ಬ ಆಚರಿಸಲಾಯಿತು. ಕಾರ್ಯಕ್ರಮದ ಅತಿಥಿಯಾಗಿ ಅರುಣ್ ಸ್ವಾಮೀಜಿ ಪಾಲ್ಗೊಂಡಿದ್ದರು. ಇನ್ನೂ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ರಾಜ್ಯಾಧ್ಯಕ್ಷ ಬಿ.ಸುಬ್ರಹ್ಮಣ್ಯ, ಶಿವಾನಂದ ಪುರಿ ಸ್ವಾಮೀಜಿ ಅವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದರು, ಜತೆಗೆ ಸ್ವಾಮೀಜಿಯವರ ಸಾಮಾಜಿಕ ಕೊಡುಗೆಗಳನ್ನು ಸ್ಮರಿಸಿದರು.
ಇಂದಿನ ದಿನಗಳಲ್ಲಿ ಖಾಸಗಿ ಶಾಲೆಗಿಂತ ಸರ್ಕಾರಿ ಶಾಲೆಗಳು ಶಿಕ್ಷಣ ಗುಣಮಟ್ಟದಲ್ಲಿ ಯಾವುದಕ್ಕೂ ಕಡಿಮೆ ಇಲ್ಲ. ಸರ್ಕಾರಿ ಶಾಲೆಗಳಲ್ಲಿ ಓದಿದವರೇ ಇಂದು ಉನ್ನತ ಹುದ್ದೆಗಳಲ್ಲಿದ್ದಾರೆ. ಆದ್ದರಿಂದ ಪೆÇೀಷಕರು ಸರ್ಕಾರಿ ಶಾಲೆಗಳಿಗೆ ತಮ್ಮ ಮಕ್ಕಳನ್ನು ಸೇರಿಸುವಂತೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಮಾಜಿ ಉಪ ಮೇಯರ್ ಮಹಾದೇವಮ್ಮ, ಮೈಸೂರು ತಾಲೂಕು ಕುರುಬರ ಸಂಘದ ಅಧ್ಯಕ್ಷ ಬಸವರಾಜು, ಪುಟ್ಟಸ್ವಾಮಿ, ಮಹಾದೇವಮ್ಮ, ಜಯ ಎಂ.ಎನ್.ಚೇತನ್ ಗೌಡ, ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯೋಪಾಧ್ಯಾಯಿನಿ ಅಂಬುಜ, ಹರ್ಷ, ಚೈತ್ರಾ, ಅಂಗನವಾಡಿ ಶಿಕ್ಷಕಿ ಸುಜಾತಾ, ಕಾಂಜೀಗೌಡ, ಮತ್ತು ಪುನೀತ್ ರಾಯಣ್ಣ ಉಪಸ್ಥಿತರಿದ್ದರು.