Home ಜಿಲ್ಲೆ “ಸಾಹಿತ್ಯವು ಕೇವಲ ಮನೋರಂಜನೆಗಲ್ಲ” – ಶರಣ ಕುಮಾರ್ ಅಭಿಮತ.

“ಸಾಹಿತ್ಯವು ಕೇವಲ ಮನೋರಂಜನೆಗಲ್ಲ” – ಶರಣ ಕುಮಾರ್ ಅಭಿಮತ.

ಸಂಜೆವಾಣಿ ವಾರ್ತೆ

ಬಳ್ಳಾರಿ, ಆ.01: ಸಾಹಿತ್ಯವು ಕೇವಲ ಮನೋರಂಜನೆಗೆ  ಮಾತ್ರವಲ್ಲ ಅದು ಪ್ರತಿಯೊಬ್ಬ ವ್ಯಕ್ತಿಗೆ ಜೀವನದ ಮೌಲ್ಯವನ್ನು ಕಲಿಸುತ್ತದೆ. ಕನ್ನಡ ಸಾಹಿತ್ಯ ಪರಿಷತ್ತು ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುವುದರ ಜೊತೆಗೆ ನಾಡಿನಾದ್ಯಂತ ಕನ್ನಡದ ಕಂಪನ್ನು ಪಸರಿಸುವ ಕೆಲಸವನ್ನು ನಿರಂತರವಾಗಿ ಮಾಡುತ್ತಾ ಬಂದಿದೆ ಎಂದು ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಶ್ರೀಯುತ ಶರಣು ಕುಮಾರ್ ರವರು ತಿಳಿಸಿದರು.

 ಕನ್ನಡ ಸಾಹಿತ್ಯ ಪರಿಷತ್ತು ಬಳ್ಳಾರಿ ತಾಲೂಕು ಘಟಕವು ಬಳ್ಳಾರಿ ನಗರದ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 2026 27 ನೇ ಸಾಲಿನ ದತ್ತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು ಈ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶರಣ ಕುಮಾರ್ ಅವರು ಇಂದಿನ ವಿದ್ಯಾರ್ಥಿಗಳಿಗೆ ತಂದೆ-ತಾಯಿ, ಗುರುಗಳ ಮೇಲೆ ಗೌರವವನ್ನು ಇರಿಸಿಕೊಳ್ಳುವುದರ ಜೊತೆಗೆ ಸಾಮಾಜಿಕ ಕಳಕಳಿಯನ್ನು, ದೇಶಾಭಿಮಾನವನ್ನು, ಭಾಷಾ ಪ್ರೇಮವನ್ನು ಬೆಳೆಸಿಕೊಳ್ಳಬೇಕು ಕನ್ನಡ ನಾಡು ನುಡಿಗೆ ಸೇವೆ ಸಲ್ಲಿಸಿದ ಮಹನೀಯರನ್ನು ಸ್ಮರಿಸುವುದರ ಜೊತೆಗೆ ನಾವು ನೀವೆಲ್ಲರೂ ಅವರು ಹಾಕಿ ಕೊಟ್ಟ ದಾರಿಯಲ್ಲಿ ಸಾಗಿದಾಗ ಮಾತ್ರ ನಮ್ಮ ಬದುಕು ಸಾರ್ಥಕವಾಗುತ್ತದೆ ಎಂದು ತಿಳಿಸಿದರು.

 ಶ್ರೀ ಸತ್ಯಂ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಆಲಂಬಾಷರವರು ಹೇಮ- ವೇಮರ ಪರಂಪರೆ ಕುರಿತು ಉಪನ್ಯಾಸ ನೀಡಿದರು, ಬಡ ಕುಟುಂಬದಲ್ಲಿ ಬೆಳೆದ ವೇಮರ ಮನ ಪರಿವರ್ತನೆ ಮಾಡುವಲ್ಲಿ ಹೇಮರೆಡ್ಡಿ ಮಲ್ಲಮ್ಮನ ಪಾತ್ರ ಬಹಳ ದೊಡ್ಡದು ಎಂದು ತಮ್ಮ ಉಪನ್ಯಾಸದಲ್ಲಿ ತಿಳಿಸಿದರು.

 ಮುಖ್ಯ ಅತಿಥಿಗಳಾದ ಶ್ರೀ ಸಂತೋಷ್ ಕುಮಾರ್. ಸಿ. ಸಹಾಯಕ ಪ್ರಾಧ್ಯಾಪಕರು ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಬಳ್ಳಾರಿ ಇವರು ತಮ್ಮ ಅತಿಥಿ ನುಡಿಯಲ್ಲಿ ಸಾವಯವ ಕೃಷಿ ಬಗ್ಗೆ ಮಾತನಾಡುತ್ತಾ ಅಂದು ಅನ್ನ, ಅಕ್ಷರ, ಔಷಧಿ  ಜೀವವನ್ನು ಉಳಿಸಿದರೆ ಇಂದು ವ್ಯಾಪಾರವಾಗಿದೆ, ಆಹಾರ ವಿಷವಾಗಿ ಬದಲಾಗುತ್ತಿದೆ  ರೈತರು ಬೆಳೆ ಬೆಳೆಯುವ ಪದ್ಧತಿಯನ್ನು ಬದಲಿಸಬೇಕಾಗಿದೆ ಹಣಕ್ಕಿಂತ ಆರೋಗ್ಯ ಮುಖ್ಯ ಎಂಬುದನ್ನು ನಾವು ನೀವೆಲ್ಲರೂ ಅರಿಯಬೇಕಾಗಿದೆ ಎಂದು ತಿಳಿಸಿದರು.

 ಕನ್ನಡ ಸಾಹಿತ್ಯ ಪರಿಷತ್ತಿನ ಬಳ್ಳಾರಿ ತಾಲೂಕು ಘಟಕದ ಅಧ್ಯಕ್ಷರಾದ ನಾಗರೆಡ್ಡಿ ಕೆ.ವಿ. ರವರು ತಮ್ಮ ಪ್ರಾಸ್ತಾವಿಕ ನುಡಿಯಲ್ಲಿ ದತ್ತಿಯ ಮಹತ್ವ ಮತ್ತು ಉದ್ದೇಶವನ್ನು ತಿಳಿಸಿದರು.

 ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಶ್ರೀಯುತ ಶಶಿಧರ್ ಪಿ.ಜಿ., ಎಸ್ ಶಾಮಣ್ಣ, ಚಾಂದ್ ಪಾಷಾ ದತ್ತಿದಾನಿಗಳಾದ ಬಿ.ಆರ್. ಗೌಡ ರವರು ಉಪಸ್ಥಿತರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಶ್ರೀಮತಿ ಸುಲೇಖ ಬಿ. ರವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದರು.

 ಕಾರ್ಯಕ್ರಮದ ಪ್ರಾರಂಭದಲ್ಲಿ ಕುಮಾರಿ ಕೃಷ್ಣವೇಣಿ ಪ್ರಾರ್ಥಿಸಿದರು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಕಾರ್ತಿಕ್ ಮರಿಸ್ವಾಮಿ ಮಠ ರವರು ಸ್ವಾಗತಿಸಿ ಕೊನೆಗೆ ವಂದಿಸಿದರು. ಕಾರ್ಯಕ್ರಮದಲ್ಲಿ ಆಗಮಿಸಿದ ಗಣ್ಯಮಾನ್ಯರನ್ನು ಗೌರವಿಸಿ ಸತ್ಕರಿಸಲಾಯಿತು .