ಸಾಹಿತ್ಯ ಸಮ್ಮೇಳನದ ಸಿದ್ದತಾ ಸಭೆ


(ಸಂಜೆವಾಣಿ ವಾರ್ತೆ)
ಬಳ್ಳಾರಿ, ಜು.01:
ಈ ವರ್ಷದ ಡಿಸೆಂಬರ್ ತಿಂಗಳಲ್ಲಿ ನಡೆಸಲು ಉದ್ದೇಶಿರುವ 88 ನೇ  ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಪೂರ್ವ ಸಿದ್ದತಾ ಸಭೆ ಇಂದು ಬೆಂಗಳೂರಿನಲಗಲಿರುವ ಪರಿಷತ್ತಿನ‌ಕಛೇರಿಯಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮ್ಮದ್ ವಹಿಸಿ ಸಮ್ಮೇಳನದ ಯಶಸ್ವಿಗೆ ಏನೆಲ್ಲ ಕೈಗೊಳ್ಳಬೇಕು ಎಂಬ ಬಗ್ಗೆ ಚರ್ಚಿಸಲಾಯ್ತು.
ಸಮ್ಮೇಳನದಸರ್ವಾಧ್ಯಕ್ಷರನ್ನಾಗಿ ಬೂಕರ್   ಪ್ರಶಸ್ತಿ ಪುರಸ್ಕೃತ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದ್ದರ ಬಗ್ಗೆ ಸಚಿವರು ಹರ್ಷ ವ್ಯಕ್ತಪಡಿಸಿದ್ದಾರೆ.
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ, ಡಿಸಿ ಪ್ರಶಾಂತ್ ಕುಮಾರ್ ಮಿಶ್ರ, ಎಸ್ಪಿ ಡಾ.ಶೋಭಾರಾಣಿ ವಿ.ಕೆ. ಜಿಪಂ ಸಿಇಓ, ಪರಿಷತ್ತಿನ‌ ಪದಾಧಿಕಾರಿಗಳು ಪಾಲ್ಗೊಂಡಿದ್ದರು.