ಸುಂಕ ಹೆಚ್ಚಳ: ಭಾರತದ ಜೊತೆ ವ್ಯವಹಾರವಿಲ್ಲ

ವಾಷಿಂಗ್ಟನ್,ಸೆ.3:- ಅಮೆರಿಕಾದ ಉತ್ಪನ್ನಗಳಿಗೆ “ಭಾರತ ಹೆಚ್ಚಿನ ಸುಂಕ ವಿಧಿಸುತ್ತಿದೆ. ಇದು ವಿಶ್ವದಲ್ಲೇ ಅತಿ ಹೆಚ್ಚು ಎಂದು ಹೇಳಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಈ ಕಾರಣಕ್ಕಾಗಿಯೇ ಭಾರತದೊಂದಿಗೆ ಹೆಚ್ಚು ವ್ಯವಹಾರ ಮಾಡುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಭಾರತ, ನಮ್ಮೊಂದಿಗೆ ವ್ಯಾಪಾರ ಮಾಡುತ್ತಿದ್ದರು. ಹೀಗಾಗಿ ನಾವು ಅವರಿಗೆ ಶುಲ್ಕ ವಿಧಿಸುತ್ತಿರಲಿಲ್ಲ, ಈ ವಿಷಯದಲ್ಲಿ ನಮ್ಮದೂ ಮೂರ್ಖತನವೂ ಇರಬಹುದು, ಆದರೆ ಅಮೆರಿಕಾದ ಉತ್ಪನ್ನಗಳಿಗೆ ಭಾರತದಲ್ಲಿ ಅತಿ ಹೆಚ್ಚು ಸುಂಕ ವಿಧಿಸಲಾಗುತ್ತಿದೆ ಎಂದಿದ್ದಾರೆ.

ಶ್ವೇತಭವನದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು ಅಮೆರಿಕಾದ ಉತ್ಪನ್ನಗಳ ಮೇಲೆ ಹೆಚ್ಚಿನ ಸುಂಕ ವಿಧಿಸಿದ ಹಿನ್ನೆಲೆಯಲ್ಲಿ ನಾವೂ ಕೂಡ ಭಾರತದ ಉತ್ಪನ್ನಗಳ ಮೇಲೆ ಹೆಚ್ಚಿನ ಸುಂಕ ವಿಧಿಸಿದ್ದೇವೆ ಎಂದು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

ಹಾರ್ಲೆ ಡೇವಿಡ್ಸನ್ ಮೋಟಾರ್ಸೈಕಲ್‍ಗಳ ಉದಾಹರಣೆ ನೀಡಿದ ಅವರು ಭಾರತದಲ್ಲಿ ಶೇಕಡಾ 200ರಷ್ಟು ಸುಂಕ ವಿಧಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮೋಟಾರು ಬೈಕ್ ಕಂಪನಿ ಭಾರತದಲ್ಲಿ ಮಾರಾಟ ಮಾಡಲು ಸಾಧ್ಯವಿಲ್ಲ ಎಂದು ಹೇಳಿದೆ, ನಮ್ಮ ದೇಶದ ಉತ್ಪನ್ನಗಳ ಬಗ್ಗೆ ತೆರಿಗೆ ವಿಧಿಸಲಾಗಿದೆ ಎಂದಿದ್ದಾರೆ.
ಅಮೆರಿಕ ಭಾರತದೊಂದಿಗೆ ಚೆನ್ನಾಗಿ ಹೊಂದಿಕೊಳ್ಳುತ್ತದೆ. ಆದರೆ ಭಾರತ, ಅಮೆರಿಕಾದ ಉತ್ಪನ್ನಗಳ ಮೇಲೆ ಹೆಚ್ಚಿನ ಸುಂಕ ವಿಧಿಸಿದೆ, ಇದನ್ನು ನೋಡಿಕೊಂಡು ಸುಮ್ಮನೆ ಇರಲು ಹೇಗೆ ಸಾಧ್ಯ ಮತ್ತು ಇಂತಹ ದೇಶಕ್ಕೆ ಕಡಿಮೆ ಸುಂಕ ಹಾಕಲು ಸಾಧ್ಯವೆ ಎಂದು ಪ್ರಶ್ನಿಸಿದ್ದಾರೆ.

ಹಲವು ವರ್ಷಗಳಿಂದ ಭಾರತ- ಅಮೆರಿಕಾ ಸಂಬಂಧ “ಏಕಪಕ್ಷೀಯ”ವಾಗಿದೆ ಎಂದು ಹೇಳಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ನಾವು ಭಾರತದೊಂದಿಗೆ ಚೆನ್ನಾಗಿ ಹೊಂದಿಕೊಳ್ಳುತ್ತೇವೆ ಎಂದಿದ್ದಾರೆ.
ಹಲವು ವರ್ಷಗಳಿಂದ ಭಾರತ ಮತ್ತು ಅಮೆರಿಕ ನಡುವಿನ ಸಂಬಂಧ “ಏಕಪಕ್ಷೀಯ”ವಾಗಿತ್ತು ಮತ್ತು ಪ್ರಧಾನಿ ನರೇಂದ್ರ ಮೋದಿ ಭಾರತದಲ್ಲಿ ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡಾಗ ಬದಲಾಯಿತು ಎಂದು ಅವರು ಹೇಳಿದ್ದಾರೆ.