
ಸುಳ್ಯ:ಸುಳ್ಯ ನ್ಯಾಯಾಲಯದ ಪ್ರಧಾನ ಸಿವಿಲ್ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನ್ಯಾಯಾಧೀಶ ಚಿರಾಗ್ ಸಿ.ಯವರು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಓಓಡಿ ಸಹಾಯಕ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದು ಸುಳ್ಯ ನ್ಯಾಯಾಲಯದಿಂದ ವರ್ಗಾವಣೆಗೊಂಡಿದ್ದಾರೆ.
ನ್ಯಾಯಾಧೀಶ ಚಿರಾಗ್. ಸಿ ರವರು ೪೫ ದಿನಗಳ ಹಿಂದೆ ಸುಳ್ಯ ಜೆಎಂಎಫ್ಸಿ ನ್ಯಾಯಾಲಯಕ್ಕೆ ಕರ್ತವ್ಯಕ್ಕೆ ಹಾಜರಾಗಿದ್ದರು. ಇದೀಗ ಸರಕಾರದ ಆದೇಶದ ಹಿನ್ನೆಲೆಯಲ್ಲಿ ಅವರು ಬೆಂಗಳೂರು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಕರ್ತವ್ಯಕ್ಕೆ ತೆರಳಲ್ಲಿದ್ದಾರೆ.
ಈ ಹಿನ್ನಲೆಯಲ್ಲಿ ಸುಳ್ಯ ತಾಲೂಕು ವಕೀಲರ ಸಂಘದ ವತಿಯಿಂದ ಸೋಮವಾರ ವರ್ಗಾವಣೆಗೊಂಡಿರುವ ನ್ಯಾಯಾಧೀಶರಿಗೆ ಬೀಳ್ಕೊಡುಗೆ ನಡೆಯಿತು. ಸುಳ್ಯ ತಾಲೂಕು ವಕೀಲರ ಸಂಘದ ಅಧ್ಯಕ್ಷ ಸುಕುಮಾರ್ ಕೋಡ್ತುಗುಳಿ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸುಳ್ಯ ನ್ಯಾಯಾಲಯದ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶೆ ಟಿ ದಮಯಂತಿ ಸೋಮಯ್ಯ, ಹಿರಿಯ ವಕೀಲರುಗಳಾದ ನಾರಾಯಣ ಕೆ, ಸುಧಾಕರ್ ನೆಟ್ಟಾರ್, ದೀಪಕ್ ಕುತ್ತಮೊಟ್ಟೆ, ಎಂ. ವೆಂಕಪ್ಪ ಗೌಡ ಶುಭ ಹಾರೈಸಿದರು.
ವೇದಿಕೆಯಲ್ಲಿ ನ್ಯಾಯಾಲಯದ ಸಹಾಯಕ ಸರಕಾರಿ ಅಭಿಯೋಜಕಿ ಪ್ರೀತಿ, ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಜಗದೀಶ್ ಡಿ.ಪಿ. ಉಪಸ್ಥಿತರಿದ್ದರು. ನ್ಯಾಯಾಲಯದ ಹಿರಿಯ ಮತ್ತು ಕಿರಿಯ ನ್ಯಾಯವಾದಿಗಳು, ಸಿಬ್ಬಂದಿ ವರ್ಗದವರು, ಆರಕ್ಷಕ ಸಿಬ್ಬಂದಿಗಳು ಭಾಗವಹಿಸಿದ್ದರು.
ಜಗದೀಶ್ ಡಿ.ಪಿ.ಸ್ವಾಗತಿಸಿ, ವಕೀಲರ ಸಂಘದ ಕ್ರೀಡಾ ಕಾರ್ಯದರ್ಶಿ ಕುಸುಮಾಧರ ಕುತ್ತಿಮುಂಡ ವಂದಿಸಿದರು. ನ್ಯಾಯವಾದಿ ಚಂಪಾ ಎಂ ವೆಂಕಪ್ಪ ಗೌಡ ಕಾರ್ಯಕ್ರಮ ನಿರೂಪಿಸಿದರು.


































