
ಕೊಪ್ಪಳ: ನ.4+ಈರುಳ್ಳಿ ತುಂಬಿದ ಲಾರಿಯೊಂದು ಸೇತುವೆ ಮೇಲಿಂದ ಕೆಳಗೆ ಬಿದ್ದ ಪರಿಣಾಮ ಲಾರಿ ಚಾಲಕ ಹಾಗೂ ಕ್ಲೀನರ್ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೊಪ್ಪಳ ತಾಲೂಕಿನ ಮುನಿರಾಬಾದ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಲಾರಿ ಹೊಸಪೇಟೆ ಕಡೆಯಿಂದ ಕುಷ್ಟಗಿ ಕಡೆಗೆ ಈರುಳ್ಳಿ ಲೋಡ್ ಮಾಡಿಕೊಂಡು ಹೊರಟಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿ ಮೇಲ್ಸೇತುವೆ ಮೇಲಿಂದ ಕೆಳಗೆ ಬಿದ್ದಿದೆ.
ಲಾರಿ ಬಿದ್ದ ಪರಿಣಾಮ ಚಾಲಕ ಹಾಗೂ ಕ್ಲೀನರ್ ಗಂಭೀರ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಮುನಿರಾಬಾದ್ ಪೆÇಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿದ್ದಾರೆ.





















