
ಸಂಜೆವಾಣಿ ವಾರ್ತೆ
ಚಾಮರಾಜನಗರ, ಅ.10-ಜಿಲ್ಲೆಯ ಪರಿಶಿಷ್ಟ ಪಂಗಡ ಸಮುದಾಯಗಳ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯ, ಸವಲತ್ತುಗಳನ್ನು ಸಮರ್ಪಕವಾಗಿ ತಲುಪಿಸಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮುಂದಾಗುವಂತೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸಚಿವ ಟಿ. ರಘುಮೂರ್ತಿ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆವತಿಯಿಂದ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡದ ವಿಶೇಷ ಘಟಕ ಯೋಜನೆಗಳಡಿ ಅನುμÁ್ಟನಗೊಳಿಸುತ್ತಿರುವ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ 132201 ಮಂದಿ ಪರಿಶಿಷ್ಟ ಸಮುದಾಯಗಳ ಜನರಿದ್ದು, ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಪರಿಶಿಷ್ಟ ಪಂಗಡದ ವಿಶೇಷ ಘಟಕ ಯೋಜನೆಗಳಡಿ ಜಿಲ್ಲಾ ಹಾಗೂ ತಾಲೂಕುಮಟ್ಟದ ಕಚೇರಿಗಳಿಗೆ ಸಮುದಾಯದ ಜನರ ಸೌಲಭ್ಯಗಳಿಗಾಗಿ ಸರ್ಕಾರದ ವತಿಯಿಂದ ಬಿಡುಗಡೆಯಾಗುವ ಅನುದಾನವನ್ನು ಸಮರ್ಪಕವಾಗಿ ವೆಚ್ಚ ಮಾಡಬೇಕು. ಯಾವುದೇ ಫಲಾನುಭವಿಗಳು ಸೌಲಭ್ಯದಿಂದ ವಂಚಿತಾರಾಗದಂತೆ ನೋಡಿಕೊಳ್ಳಬೇಕು. ಸೌಲಭ್ಯ ವಿತರಣೆ ಬಗ್ಗೆ ರೂಪುರೇμÉ ತಯಾರಿಸಲು ಕಳೆದ ಮೂರು ವರ್ಷಗಳ ವಾರ್ಷಿಕ ಅಭಿವೃದ್ಧಿ ವರದಿಗಳನ್ನು ಅಧಿಕಾರಿಗಳು ಪರಾಮರ್ಶಿಸಬೇಕು. ಅರ್ಹರಿಗೆ ಸೌಲಭ್ಯಗಳು ದೊರೆಯಲು ಅಧಿಕಾರಿಗಳು ಮುಂದಾಗುವಂತೆ ಸಚಿವರು ನಿರ್ದೇಶನ ನೀಡಿದರು.
ಯೋಜನೆಗಳ ಪರಿಶೀಲನಾ ಸಭೆಗೆ ಅಧಿಕಾರಿಗಳು ಕ್ರಮಬದ್ಧ ಮಾಹಿತಿ ಒದಗಿಸಬೇಕು. ಪರಿಶಿಷ್ಟ ಪಂಗಡಗಳ ಜನರಿಗೆ ಸೌಲಭ್ಯ ನೀಡುವ ಸಮಗ್ರ ಪ್ರಗತಿ ವರದಿಯನ್ನು ಸಂಬಂಧಿತ ಎಲ್ಲಾ ಇಲಾಖೆಯ ಅಧಿಕಾರಿಗಳು ಪ್ರತಿತಿಂಗಳು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕು. ಯಾವ ಯಾವ ಇಲಾಖೆಗಳು ಎಷ್ಟು ಅನುದಾನ ಖರ್ಚು ಮಾಡಿದ್ದಾರೆ. ನಿಗದಿತ ಗುರಿ ಸಾಧಿಸಿದ್ದಾರೆಯೇ ಎಂಬುದನ್ನು ಜಿಲ್ಲಾಮಟ್ಟದ ಅಧಿಕಾರಿಗಳು ಪರಿಶೀಲನೆ ಮಾಡಬೇಕು. ತಪ್ಪಿದಲ್ಲಿ ಅಧಿಕಾರಿಗಳ ಕಾರ್ಯವೈಖರಿಯನ್ನು ಗಂಭೀರವಾಗಿ ಪರಿಗಣಿಸಲಾಗುವುದೆಂದು ಸಚಿವರು ಎಚ್ಚರಿಕೆ ನೀಡಿದರು.
ಸರ್ಕಾರದ ಯೋಜನೆಗಳನ್ನು ಜನರಿಗೆ ಅಧಿಕಾರಿಗಳು ಅತ್ಯಂತ ಜವಾಬ್ದಾರಿಯುತವಾಗಿ ತಲುಪಿಬೇಕು. ಯೋಜನೆಗಳ ಅನುμÁ್ಟನದಲ್ಲಿ ಕೇವಲ ಭೌತಿಕ ಗುರಿ ಮಾತ್ರವಲ್ಲ ಸಾಧನೆಯು ಮುಖ್ಯವಾಗಿರಬೇಕು. ಸೌಲಭ್ಯಗಳು ಫಲಾನುಭವಿಗಳಿಗೆ ತಲುಪಿರುವುದಕ್ಕೆ ಅಧಿಕಾರಿಗಳು ಕಡತ ತಯಾರಿಸುವುದಲ್ಲ. ಸಂಬಂಧಪಟ್ಟ ದಾಖಲಾತಿಗಳು ಕ್ರಮಬದ್ಧವಾಗಿರಬೇಕು. ಜಿಲ್ಲೆಯಲ್ಲಿ 2,16,000 ರೈತರಿದ್ದು, ಬೆಳೆ ಸರ್ವೇಯಲ್ಲಿ 18350 ರೈತರು ಮಾತ್ರ ವಿಮೆಗೆ ಒಳಪಟ್ಟಿದ್ದಾರೆ. ಇನ್ನೂ ಹೆಚ್ಚಿನ ಪ್ರಗತಿಯಾಗಬೇಕು. ಸಹಕಾರ ಹಾಗೂ ಮೀನುಗಾರಿಗೆ ಇಲಾಖೆ ಯೋಜನೆ ಅನುμÁ್ಠನದಲ್ಲಿ ಹೆಚ್ಚಿನ ಗುರಿ ನಿಗದಿ ಮಾಡಬೇಕು ಎಂದರು.
ಕೆಲ ಗ್ರಾಮಗಳಲ್ಲಿ ಸಮುದಾಯಗಳ ಜನರಿಗೆ ಯಾರಿಗೆ ನಿವೇಶನಗಳಿಲ್ಲ, ಮನೆಗಳಿಲ್ಲ, ಸ್ಮಶಾನಗಳಿಲ್ಲ, ಅಂತಹ ಗ್ರಾಮಗಳಿಗೆ ಅಧಿಕಾರಿಗಳು ಖುದ್ದು ಭೇಟಿ ನೀಡಿ ಅಗತ್ಯ ಸೌಲಭ್ಯ ತಲುಪಿಸಲು ಸಕ್ರಿಯರಾಗಬೇಕು. ಜಿಲ್ಲೆಯ ಎಲ್ಲಾ 130 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಭಾರತ್ ಜೂಡೋ ಯುವಕ ಸಂಘಗಳ ನೊಂದಣಿ ಚುರುಕುಗೊಳಿಸಬೇಕು. ನೊಂದಣಿಯಲ್ಲಿ ಪರಿಶಿಷ್ಟ ಪಂಗಡದ ಯುವಕ, ಯುವತಿಯರಿಗೆ ಆದ್ಯತೆ ನೀಡುವಂತೆ ಎಂದು ಸಚಿವÀ ಟಿ. ರಘುಮೂರ್ತಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ,ಅಶೋಕ್, ಜಂಟಿ ನಿರ್ದೆಶಕ ಡಾ,ರಾಜಕುಮಾರ್, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೆಶಕ ಅಶೋಕ್ ದುಡಗಂಟಿ, ಕಾವೇರಿ ಜಲಾನಯನ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಿ. ಮರಿಸ್ವಾಮಿ, ಗ್ಯಾರಂಟಿ ಯೋಜನೆಗಳ ಅನುμÁ್ಠನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಚ್.ವಿ. ಚಂದ್ರು, ಹೆಚ್ಚುವರಿ ಜಿಲ್ಲಾಧಿಕಾರಿ ಪ್ರಿಯದರ್ಶಿನಿ, ಹೆಚ್ಚುವರಿ ಪೆÇಲೀಸ್ ವರಿμÁ್ಠಧಿಕಾರಿ ಎಂ.ಎನ್. ಶಶಿಧರ್, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಹೊನ್ನರಾಜು, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮುನಿರಾಜು, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೆಶಕ ಚಂದ್ರಪಾಟೀಲ್, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಪುಟ್ಟಗೌರಮ್ಮ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ಕುಮಾರ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಎಚ್.ಎಸ್. ಬಿಂದ್ಯಾ, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

























