Home ಜಿಲ್ಲೆ ಬೆಂಗಳೂರು ಸ್ಕಾಲ್ವಿ ಇಂಟರ್‍ನ್ಯಾಷನಲ್ ಸ್ಕೂಲ್: ಸಾಮೂಹಿಕ ಯೋಗಾಭ್ಯಾಸ

ಸ್ಕಾಲ್ವಿ ಇಂಟರ್‍ನ್ಯಾಷನಲ್ ಸ್ಕೂಲ್: ಸಾಮೂಹಿಕ ಯೋಗಾಭ್ಯಾಸ

ಬೆಂಗಳೂರು,ಜೂ21: ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಸ್ಕಾಲ್ವಿ ಇಂಟರ್‍ನ್ಯಾಷನಲ್ ಸ್ಕೂಲ್ ವತಿಯಿಂದ ಆಯೋಜಿಸಿದ್ದ ಯೋಗ ನಾದ ಮಹೋತ್ಸವ 2026'' ಕಾರ್ಯಕ್ರಮವು ಸಾವಿರಾರು ವಿದ್ಯಾರ್ಥಿಗಳು, ಪೆÇೀಷಕರು, ಶಿಕ್ಷಕರು, ಸಿಬ್ಬಂದಿ ಹಾಗೂ ಹಿರಿಯ ನಾಗರಿಕರ ಭಾಗವಹಿಸುವಿಕೆಯಿಂದ ಯಶಸ್ವಿಯಾಗಿ ನಡೆಯಿತು. ಆರೋಗ್ಯಕರ ವಯಸ್ಸಿಗೆ ಯೋಗ” ಎಂಬ ಧ್ಯೇಯವಾಕ್ಯದೊಂದಿಗೆ ನಡೆದ ಈ ಕಾರ್ಯಕ್ರಮದಲ್ಲಿ ಸ್ಕಾಲ್ವಿ ಇಂಟರ್‍ನ್ಯಾಷನಲ್ ಸ್ಕೂಲ್, ದಿ ಆರ್ಟ್ ಆಫ್ ಲಿವಿಂಗ್ ಹಾಗೂ ಯುರೋ ಕಿಡ್ಸ್ ಜೆ.ಪಿ.ನಗರ ಶಾಲೆಯ ವಿದ್ಯಾರ್ಥಿಗಳು, ಪೆÇೀಷಕರು ಮತ್ತು ಶಿಕ್ಷಕರು ಉತ್ಸಾಹದಿಂದ ಪಾಲ್ಗೊಂಡು ಸಾಮೂಹಿಕ ಯೋಗಾಭ್ಯಾಸ ನಡೆಸಿದರು.


ಕಾರ್ಯಕ್ರಮವನ್ನು ಬೆಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಎಂ. ಕೃಷ್ಣಪ್ಪ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಶಾಲಾ ಆವರಣದಲ್ಲಿ ನಿರ್ಮಿಸಲಾಗಿರುವ ಅಂತಾರಾಷ್ಟ್ರೀಯ ಗುಣಮಟ್ಟದ ಈಜುಕೊಳವನ್ನು ಅವರು ಲೋಕಾರ್ಪಣೆ ಮಾಡಿದರು. ವಿದ್ಯಾರ್ಥಿಗಳಿಗೆ ವಿಶ್ವಮಟ್ಟದ ಕ್ರೀಡಾ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಇದು ಮಹತ್ವದ ಹೆಜ್ಜೆಯಾಗಿದೆ.


ಕಾರ್ಯಕ್ರಮದಲ್ಲಿ ಸ್ಕಾಲ್ವಿ ಇಂಟರ್‍ನ್ಯಾಷನಲ್ ಸ್ಕೂಲ್ ಅಧ್ಯಕ್ಷ ಸತೀಶ್ ಕಾಕಲ್, ಕಾರ್ಯದರ್ಶಿ ಡಾ. ಸುಂದರ್ ರಾಜು, ಪ್ರಾಂಶುಪಾಲೆ ಸುಂಕುರಾತ್ರಿ ಉಷಾ, ಪಾಲಿಕೆ ಸದಸ್ಯ ಟಿ. ನಾರಾಯಣ, ಪ್ಯಾರಾ ಸ್ವಿಮ್ಮರ್, ನೃತ್ಯಗಾರ ಹಾಗೂ ಪ್ರೇರಣಾದಾಯಕ ವಾಗ್ಮಿ ವಿಶ್ವಾಸ್ ಕೆ.ಎಸ್. ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಸತೀಶ್ ಕಾಕಲ್, ಮಕ್ಕಳ ಸಮಗ್ರ ಬೆಳವಣಿಗೆಗೆ ಶಿಕ್ಷಣದ ಜೊತೆಗೆ ಕ್ರೀಡೆ, ಯೋಗ, ಸಾಂಸ್ಕೃತಿಕ ಹಾಗೂ ಪಠ್ಯೇತರ ಚಟುವಟಿಕೆಗಳು ಅಗತ್ಯವೆಂದು ಹೇಳಿದರು. ಇವು ಮಕ್ಕಳಲ್ಲಿ ಆತ್ಮವಿಶ್ವಾಸ, ನಾಯಕತ್ವ ಗುಣ, ಶಿಸ್ತು ಮತ್ತು ದೈಹಿಕ ಸಾಮಥ್ರ್ಯವನ್ನು ಬೆಳೆಸಲು ಸಹಕಾರಿಯಾಗುತ್ತವೆ ಎಂದು ತಿಳಿಸಿದರು.
ಡಾ. ಸುಂದರ್‍ರಾಜು ಮಾತನಾಡಿ, ಅಂತಾರಾಷ್ಟ್ರೀಯ ಗುಣಮಟ್ಟದ ಈಜುಕೊಳ ಉದ್ಘಾಟನೆಯು ಸಂಸ್ಥೆಗೆ ಹೆಮ್ಮೆಯ ವಿಷಯವಾಗಿದ್ದು, ವಿದ್ಯಾರ್ಥಿಗಳಿಗೆ ಜಾಗತಿಕ ಮಟ್ಟದ ಕ್ರೀಡಾ ಸೌಲಭ್ಯ ಒದಗಿಸುವ ಗುರಿಯನ್ನು ಹೊಂದಿದ್ದೇವೆ ಎಂದರು.


ಯುರೋ ಕಿಡ್ಸ್ ಜೆ.ಪಿ.ನಗರ ವಿದ್ಯಾರ್ಥಿಗಳ ಯೋಗ ಪ್ರದರ್ಶನಗಳು, ಸಾಮೂಹಿಕ ಯೋಗಾಭ್ಯಾಸ, ಆರೋಗ್ಯ ಜಾಗೃತಿ ಕಾರ್ಯಕ್ರಮಗಳು ಹಾಗೂ ವಿವಿಧ ಚಟುವಟಿಕೆಗಳು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದವು. ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಿದ ಈ ಕಾರ್ಯಕ್ರಮ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು.