Home ಜಿಲ್ಲೆ ಮೈಸೂರು ಸ್ವಾತಂತ್ರ್ಯೋತ್ಸವ ಸ್ವಚ್ಛತಾ ಅಭಿಯಾನ ಆರಂಭ

ಸ್ವಾತಂತ್ರ್ಯೋತ್ಸವ ಸ್ವಚ್ಛತಾ ಅಭಿಯಾನ ಆರಂಭ

ಸಂಜೆವಾಣಿ ನ್ಯೂಸ್
ಮೈಸೂರು, ಜು.30:-
80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಹಮ್ಮಿಕೊಂಡಿರುವ “ಸ್ವಾತಂತ್ರ್ಯೋತ್ಸವ ಸ್ವಚ್ಛತಾ ಅಭಿಯಾನ-2026: 80 ತ್ಯಾಜ್ಯ ಮುಕ್ತ ತಾಣಗಳು” ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಫೆÇೀರ್ಟ್ ಲೈಟ್ ಸರ್ಕಲ್ ಸಮೀಪದ ದಾವಣಪೇಟೆ ಖಾಸಗಿ ರಸ್ತೆಯಲ್ಲಿರುವ ಗಾರ್ಬೇಜ್ ವಲ್ನರಬಲ್ ಪಾಯಿಂಟ್ ತಾಣವನ್ನು ಸ್ವಚ್ಛಗೊಳಿಸಿ, ತ್ಯಾಜ್ಯಮುಕ್ತ ತಾಣವನ್ನಾಗಿ ಪರಿವರ್ತಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮದಲ್ಲಿ ವಿವಿಧ ಸಂಘ-ಸಂಸ್ಥೆಗಳ ಸದಸ್ಯರು, ಸ್ವಯಂಸೇವಕರು ಹಾಗೂ ಸ್ಥಳೀಯ ನಾಗರಿಕರು ಭಾಗವಹಿಸಿ ಸ್ವಚ್ಛತಾ ಕಾರ್ಯದಲ್ಲಿ ಕೈಜೋಡಿಸಿದರು.


ಈ ಸಂದರ್ಭದಲ್ಲಿ ತ್ಯಾಜ್ಯ ತೆರವು ಮತ್ತು ಸ್ಥಳ ಪರಿವರ್ತನಾ ಕಾರ್ಯಕ್ರಮದಲ್ಲಿ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಸವಿತಾ ಎಂ.ಸಿ ರವರು, ಪಾಲಿಕೆಯ ಹಿರಿಯ ಅಧಿಕಾರಿಗಳು, ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಪರಿಸರ ಅಭಿಯಂತರರು, ಆರೋಗ್ಯ ನಿರೀಕ್ಷಕರು, ಮೇಲ್ವಿಚಾರಕರು ಹಾಗೂ ಪೌರಕಾರ್ಮಿಕರು ಉಪಸ್ಥಿತರಿದ್ದರು.
ಸ್ವಚ್ಛಗೊಳಿಸಲಾದ ತಾಣದಲ್ಲಿ ಪುನಃ ತ್ಯಾಜ್ಯ ಸುರಿಯದಂತೆ ನಿರಂತರ ಮೇಲ್ವಿಚಾರಣೆ ಕೈಗೊಳ್ಳಲಾಗುವುದು. ಮೈಸೂರು ನಗರದ ಗುರುತಿಸಲಾದ ಒಟ್ಟು 80 ಗಾರ್ಬೇಜ್ ವಲ್ನರಬಲ್ ಪಾಯಿಂಟ್ ಗಳನ್ನು ಹಂತ ಹಂತವಾಗಿ ಸ್ವಚ್ಛಗೊಳಿಸಿ, ತ್ಯಾಜ್ಯ ಮುಕ್ತ ತಾಣಗಳನ್ನಾಗಿ ಪರಿವರ್ತಿಸುವುದು ಈ ಅಭಿಯಾನದ ಉದ್ದೇಶವಾಗಿದೆ. ನಗರದ ಸ್ವಚ್ಛತೆಯನ್ನು ಕಾಪಾಡಲು ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಮೈಸೂರು ಮಹಾನಗರ ಪಾಲಿಕೆಯೊಂದಿಗೆ ಕೈಜೋಡಿಸಿ ಸಹಕರಿಸುವಂತೆ ಈ ಮೂಲಕ ಕೋರಲಾಗಿದೆ.