
ಸಂಜೆವಾಣಿ ವಾರ್ತೆ
ಹಗರಿಬೊಮ್ಮನಹಳ್ಳಿ: ಆ.04 ಪಟ್ಟಣದ ಠಾಣೆಯಲ್ಲಿ ನಡೆದ ಲಾಕಪ್ ಡೆತ್ ಕುರಿತು ಕೂಡಲೇ ನ್ಯಾಯಾಂಗ ತನಿಖೆ ನಡೆಸಬೇಕೆಂದು ಆಗ್ರಹಿಸಿ ಸಿಪಿಎಂ ಪಕ್ಷದಿoದ ಸೋಮವಾರ ಪ್ರತಿಭಟನೆ ನಡೆಯಿತು.
ತಾಲೂಕು ಸಂಚಾಲಕ ಎಸ್. ಜಗನ್ನಾಥ ಮಾತನಾಡಿ, ಕಟ್ಟಡ ಕಾರ್ಮಿಕ ಖಲಿಲುಲ್ಲಾ ಅವರನ್ನು ಪೊಲೀಸರು ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದು, ಠಾಣೆಯಲ್ಲಿಯೇ ಮೃತಪಟ್ಟಿದ್ದಾರೆ ಎಂದು ವೈದ್ಯರೇ ತಿಳಿಸಿದ್ದಾರೆ. ಇದು ಮೇಲ್ನೋಟಕ್ಕೆ ಸ್ಪಷ್ಟ ಲಾಕಪ್ ಸಾವು ಎಂಬುದರಲ್ಲಿ ಅನುಮಾನವಿಲ್ಲ. ತನಿಖೆ ನಡೆಸಲಾಗುವುದು ಎಂದ ಎಸ್ಪಿ ತಿಳಿಸಿದ್ದರೂ, ಇದು ಅತ್ಯಂತ ಗಂಭೀರ ಪ್ರಕರಣವಾಗಿರುವುದರಿಂದ ಕೂಡಲೇ ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಸಂಚಾಲಕ ಆರ್.ಎಸ್. ಬಸವರಾಜ ಮಾತನಾಡಿ, ಈ ಅಮಾನವೀಯ ಘಟನೆಗೆ ನೇರ ಕಾರಣರ= ಇಬ್ಬರು ಪೊಲೀಸರನ್ನು ತಕ್ಷಣ ಸೇವೆಯಿಂದ ವಜಾಗೊಳಿಸಬೇಕು ಮತ್ತು ಮುಂದಿನ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. ನಂತರ ಮನವಿಯನ್ನು ಉಪ ತಹಸೀಲ್ದಾರ್ ಶಿವಕುಮಾರ ಗೌಡಗೆ ಸಲ್ಲಿಸಲಾಯಿತು. ಪ್ರಮುಖರಾದ ಕೆ. ಗಾಳೆಪ್ಪ, ಸರ್ದಾರ ಹುಲಿಗೆಮ್ಮ, ಪಿ. ಚಾಂದ್ಬೀ, ಕೆ. ರಮೇಶ, ರಂಗಪ್ಪ ದಾಸರು, ಕೆ. ಬಸವರಾ ಸೋಗಿ ಬಸವರಾಜ ಸೇರಿದಂತೆ ಹಲವರು ಉಪಸ್ಥಿತರಿದ್ದರು.































