ಹಿಂದುಳಿದ ವರ್ಗ 2ಎ ಮೀಸಲಾತಿ ನೀಡಲು ಕೇಂದ್ರ ಸರ್ಕಾರಕ್ಕೆ ಶಿಪಾರಸ್ಸು: ಹೆಚ್.ಡಿ.ಕುಮಾರಸ್ವಾಮಿ

ಸಂಜೆವಾಣಿ ವಾರ್ತೆ
ಕೆ.ಆರ್.ನಗರ,ಜ.12:-
ಅಖಿಲ ನಾಮಧಾರಿಗೌಡ ಜನಾಂಗಕ್ಕೆ ಮುಂಬರುವ ದಿನಗಳಲ್ಲಿ ರಾಜಕೀಯವಾಗಿ ಸ್ಥಾನಮಾನ ನೀಡುವುದರ ಜೊತಗೆ ಹಿಂದುಳಿದ ವರ್ಗ 2ಎ ಮೀಸಲಾತಿ ನೀಡಲು ಕೇಂದ್ರ ಸರ್ಕಾರಕ್ಕೆ ಶಿಪಾರಸ್ಸು ಮಾಡುವುದಾಗಿ ಕೇಂದ್ರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.
ಪಟ್ಟಣದ ಅಖಿಲ ನಾಮದಾರಿ ಗೌಡ ಸಮುದಾಯ ಭವನದಲ್ಲಿ ತಾಲೂಕು ಅಖಿಲ ನಾಮಧಾರಿಗೌಡ ಸಂಘದ ವತಿಯಿಂದ ಆಯೋಜಿಸಿದ್ದ ಸಮುದಾಯ ಭವನಕ್ಕೆ 25ನೇ ವರ್ಷಗಳ ಬೆಳ್ಳಿ ಹಬ್ಬದ ಸಂಭ್ರಮಾಚರಣೆ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದರು.


ಅತಿ ಸೂಕ್ಷ್ಮಾತಿ ಸೂಕ್ಷ್ಮ ಸಮಾಜಗಳನ್ನು ರಾಜಕೀಯ ಓಟ್ ಬ್ಯಾಂಕ್ ಗಾಗಿ ಬಳಿಸಿ ಕೊಂಡು ಯಾವುದೇ ರಾಜಕೀಯವಾಗಿ ಸ್ಥಾನಮಾನ ಹಾಗೂ ಮೀಸಲಾತಿಗಳನ್ನು ನೀಡದೇ ವಂಚಿಸುತ್ತಿದ್ದು ಪ್ರಸ್ತುತ ರಾಜ್ಯದಲ್ಲಿ ಹಿಂದುಳಿದ ವರ್ಗಗಳಿಗೆ ಶಕ್ತಿ ತುಂಬುವ ಬದಲು ರಾಜಕೀಯವಾಗಿ ದುರುಪಯೋಗವಾಗುತ್ತಿದೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ದ್ವನಿ ಇಲ್ಲದ ಸಮಾಜಕ್ಕೆ ದ್ವನಿಯಾಗಿ ಬೆನ್ನೆಲುಬಾಗಿ ಜೆಡಿಎಸ್ ಪಕ್ಷ ಸದಾ ನಿಂತಿದೆ, ಹಾಗಾಗಿ ಉಪ್ಪಾರ ಸಮಾಜ ಮುಖಂಡರೊಬ್ಬರನ್ನು ವಿಧಾನ ಪರಿಷತ್ ಸದಸ್ಯರಾಗಿ ಮಾಡಿ ರಾಜಕೀಯವಾಗಿ ಸ್ಥಾನಮಾನ ನೀಡಿದ್ದೇವೆ ಎಂದು ಸ್ಮರಿಸಿದರು.


ರಾಜ್ಯದಲ್ಲಿ ಅಖಿಲ ನಾಮಧಾರಿ ಸಮುದಾಯ ಕಡಿಮೆ ಸಂಖ್ಯೆಯಲ್ಲಿದ್ದು ಸಮಾಜವನ್ನು ದೊಡ್ಡಮಟ್ಟದಲ್ಲಿ ಗುರುತಿಸಿ ರಾಜಕೀಯ ಸ್ಥಾನಮಾನಗಳನ್ನು ನೀಡಿಲ್ಲ ಎಂಬ ನೋವು ಸಮುದಾಯಕ್ಕೆ ಇದೆ ಹಾಗಾಗಿ ಮುಂದಿನ ದಿನಗಳಲ್ಲಿ ರಾಜಕೀಯ ಪ್ರಾತಿನಿಧ್ಯ ನೀಡಿ ಪ್ರಾಮಾಣಿಕವಾಗಿ ಸರಿಪಡಿಸುತ್ತೇನೆ ಎಂದು ಭರವಸೆ ನೀಡಿದರು.


ನಾಮಧಾರಿ ಸಮಾಜವನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಲು ರಾಜ್ಯ ಸರ್ಕಾರದಿಂದ ಶಿಫಾರಸ್ಸು ಬಂದರೆ ಕೂಡಲೇ ನಾನು ಪ್ರಧಾನಮಂತ್ರಿಗಳೊಂದಿಗೆ ಹಾಗೂ ಸಂಬಂಧಪಟ್ಟ ಇಲಾಖೆ ಸಚಿವರೊಂದಿಗೆ ಚರ್ಚಿಸಿ ಶೀಘ್ರವಾಗಿ ನಾಮಧಾರಿ ಸಮಾಜಕ್ಕೆ ಓಬಿಸಿ ಪಟ್ಟಿಗೆ ಸೇರಿಸಲು ಕ್ರಮ ಕೈಗೊಳ್ಳಲಾಗುತ್ತೇನೆ ಎಂದು ಭರವಸೆ ನೀಡಿದರು.
ಕಾರ್ಯಕ್ರಮದಲ್ಲಿ ವೇದಿಕೆಯಲ್ಲಿ ಸಮುದಾಯದ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳನ್ನು, ನಿವೃತ್ತ ಯೋಧರು ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ ಆರ್ಥಿಕ ನೆರವು ನೀಡಿದ ದಾನಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.


ಕಾರ್ಯಕ್ರಮವನ್ನು ಕುರಿತು ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್, ನವನಗರ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಕೆ.ಎನ್.ಬಸಂತ್ ಮಾತನಾಡಿದರು.
ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಮಾಜಿ ಶಾಸಕ ಅಶ್ವಿನ್ ಕುಮಾರ್, ತಾಲೂಕು ಅಖಿಲ ನಾಮಧಾರಿಗೌಡ ಸಂಘದ ಅಧ್ಯಕ್ಷ ಕೆ.ಆರ್.ಅಶೋಕ್ ಕುಮಾರ್, ಉಪಾಧ್ಯಕ್ಷ ಕೆಗ್ಗೆರೆ ಗಿರೀಶ್, ಕಾರ್ಯದರ್ಶಿ ಪುರುಷೋತ್ತಮ, ಖಜಾಂಚಿ ಕೃಷ್ಣೇಗೌಡ, ಕೇಂದ್ರ ಸಂಘದ ಕೆ.ಟಿ.ಗೋವಿಂದರಾಜು, ಜಿಪಂ ಮಾಜಿ ಸದಸ್ಯ ಅಮಿತ್ ವಿ ದೇವರಹಟ್ಟಿ, ತಾಪಂ ಮಾಜಿ ಅಧ್ಯಕ್ಷ ಜಯರಾಮೇಗೌಡ, ಹಿರಿಯ ಉಪನ್ಯಾಸಕ ಡಿ.ಶ್ರೀನಿವಾಸ್, ಜೆಡಿಎಸ್ ವಕ್ತಾರ ಕೆ.ಎಲ್.ರಮೇಶ್, ನಿಕಟಪೂರ್ವ ಕಾರ್ಯದರ್ಶಿ ಎಂ.ಆರ್.ಪುಟ್ಟರಾಜು, ನಿರ್ದೇಶಕರಾದ ಎಸ್.ರುಕ್ಮಾಂಗದ, ಎನ್.ಡಿ.ಗೋವಿಂದರಾಜು, ಕೆ.ಎಸ್.ಸುಮಂತ್, ಕೆ.ಬಿ.ಪ್ರಕಾಶ್, ಕೆ.ಎನ್.ನಂಜೇಗೌಡ, ಡಿ.ನಟರಾಜು, ಜಯಪ್ರಕಾಶ್, ಎಂ.ಪಿ.ನಂಜುಂಡ, ಎಸ್.ಕೆ.ವೆಂಕಟೇಶ್, ನಾಮಧಾರಿ ಸಮಾಜದ ಮುಖಂಡರಾದ ಎರೆಮನುಗನಹಳ್ಳಿ ಸುನೀಲ್, ಡೈರಿಆನಂದ್, ಮರೀಗೌಡ, ನಾರಾಯಣಪುರ ಬಾಬು, ತ್ಯಾಗರಾಜ್, ಹರಂಬಳ್ಳಿ ಕೊಪ್ಪಲು ರವಿ ಸೇರಿದಂತೆ ಮೊದಲಾದವರು ಇದ್ದರು.