Home ಜಿಲ್ಲೆ ಮಂಗಳೂರು ಹಿರಿಯ ಸಹಕಾರಿ ಧುರೀಣ ಜಾಕೆ ಮಾಧವ ಗೌಡರಿಗೆ ರಾಜ್ಯ ಸಹಕಾರ ರತ್ನ ಪ್ರಶಸ್ತಿ

ಹಿರಿಯ ಸಹಕಾರಿ ಧುರೀಣ ಜಾಕೆ ಮಾಧವ ಗೌಡರಿಗೆ ರಾಜ್ಯ ಸಹಕಾರ ರತ್ನ ಪ್ರಶಸ್ತಿ

ಸುಳ್ಯ:ಹಿರಿಯ ಸಹಕಾರಿ ಧುರೀಣ ಜಾಕೆ ಮಾಧವ ಗೌಡ ಅವರಿಗೆ ರಾಜ್ಯ ಸಹಕಾರ ರತ್ನ ಪ್ರಶಸ್ತಿಗೆ ಭಾಜನರಾಗಿದ್ದು, ನ.೧೪ರಂದು ಬೆಂಗಳೂರಿನಲ್ಲಿ ನಡೆಯುವ ರಾಜ್ಯ ಸಹಕಾರ ಸಪ್ತಾಹದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಿಂದ ಪ್ರಶಸ್ತಿ ಪ್ರದಾನ ನಡೆಯಲಿದೆ.

ಜಾಕೆ ಮಾಧವ ಗೌಡರು ಪಂಬೆತ್ತಾಡಿ ಸಹಕಾರ ಸಂಘದ ಅಧ್ಯಕ್ಷರಾಗಿ ಸುದೀರ್ಘ ಸೇವೆ ಸಲ್ಲಿಸಿ, ಪ್ರಸ್ತುತ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಡಿಸಿಸಿ ಬ್ಯಾಂಕ್ ಮಾಜಿ ಉಪಾಧ್ಯಕ್ಷರಾಗಿ, ಸುಳ್ಯ ಎಪಿಎಂಸಿ ಮಾಜಿ ಅಧ್ಯಕ್ಷರಾಗಿ, ಸುಳ್ಯ ಎಲ್ ಡಿ ಬ್ಯಾಂಕ್ ಮಾಜಿ ಅಧ್ಯಕ್ಷರಾಗಿ, ಸುಳ್ಯ ಟಿ.ಎ.ಪಿ.ಸಿ ಎಂ.ಎಸ್. ಮಾಜಿ ಅಧ್ಯಕ್ಷರಾಗಿ ಸಹಕಾರಿ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ.