
ಸಂಜೆವಾಣಿ ವಾರ್ತೆ
ಹೊಸಪೇಟೆ.ಜು.8 ರಾಜ್ಯ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ವಿಭು ಬಖ್ರೂ ಅವರು ಮಂಗಳವಾರ ಜಿಲ್ಲಾ ನ್ಯಾಯಾಲಯಕ್ಕೆ ಭೇಟಿ ನೀಡಿ ನ್ಯಾಯಾಂಗ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.
ನಂತರ ಜಿಲ್ಲಾ ವಕೀಲರ ಭವನಕ್ಕೆ ಭೇಟಿ ನೀಡಿ ಸ್ಥಳೀಯ ವಕೀಲರೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಎಂ. ರಾಜಶೇಖರ, ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ.ಟಿ.ಕುಮಾರಸ್ವಾಮಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎನ್.ಸುಬ್ರಮಣ್ಯ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಪ್ರಶಾಂತ್ ನಾಗಲಾಪುರ, 2ನೇ ಅಪರ ಸಿವಿಲ್ ನ್ಯಾಯಾಧೀಶರಾದ ಶೃತಿ ತೇಲಿ, 3ನೇ ಅಪರ ಸಿವಿಲ್ ನ್ಯಾಯಾಧೀಶರಾದ ಶರದಿ ರಾಜ್, ಅಪರ ಜಿಲ್ಲಾಧಿಕಾರಿ ಈ.ಬಾಲಕೃಷ್ಣ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಜಿ.ಮಂಜುನಾಥ್, ಉಪವಿಭಾಗಾಧಿಕಾರಿ ಪಿ.ವಿವೇಕಾನಂದ, ವಕೀಲರ ಸಂಘದ ಜಿಲ್ಲಾಧ್ಯಕ್ಷ ಗುಜ್ಜಲ ನಾಗರಾಜ್ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ವಕೀಲರ ಸಂಘದ ಪದಾಧಿಕಾರಿಗಳು ಮತ್ತು ವಕೀಲರು ಇದ್ದರು.



























