
ಶಿವಮೊಗ್ಗ.ಆ.22:-ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಹೊಸನಗರ ಸಮಟಗಾರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕಿ ರತ್ನಕುಮಾರಿ ಭಾಜನರಾಗಿದ್ದಾರೆ.
ಕೇಂದ್ರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ಪ್ರಕಟಿಸಿದ್ದು,ಈ ಪ್ರತಿಷ್ಠಿತ ಪ್ರಶಸ್ತಿಗೆ ದೇಶಾದ್ಯಂತ ಒಟ್ಟು 48 ಶಿಕ್ಷಕರು ಆಯ್ಕೆಯಾಗಿದ್ದಿ,ಹೊಸನಗರ ತಾಲೂಕಿನ ಶಿಕ್ಷಕಿ ರತ್ನಕುಮಾರಿ ಕೂಡ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಸೆಪ್ಟೆಂಬರ್ 5 ರಂದು ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುವ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರತ್ನಕುಮಾರಿಗೆ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ. ಹೊಸನಗರ ತಾಲ್ಲೂಕಿನ ಹುಂಚ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿಯಾಗಿ ರತ್ನಕುಮಾರಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

































