
ಕಲಬುರಗಿ: ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ 1 ಸಾವಿರ ಹುದ್ದೆಗಳಿಗೆ ಹೆಚ್ಚುವರಿ ಇನ್ನೂ 1 ಸಾವಿರ ಪ್ರಾಧ್ಯಾಪಕರ ಹುದ್ದೆಗಳನ್ನು ಸೇರಿಸಿ ಶೀಘ್ರದಲ್ಲಿಯೇ ಭರ್ತಿ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ಹೇಳಿದರು.
ಗುಲಬರ್ಗಾ ವಿಶ್ವವಿದ್ಯಾಲಯದ ಅತಿಥಿ ಉಪನ್ಯಾಸಕರ ಸಂಘ ಪ್ರಾಧ್ಯಾಪಕರ ಹುದ್ದೆ ಭರ್ತಿ ಮಾಡುವಂತೆ ಸಲ್ಲಿಸಿದ ಮನವಿಗೆ ಸಚಿವರು ಪ್ರತಿಕ್ರಿಯಿಸಿದರು.
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಹುದ್ದೆಗಳು ಭರ್ತಿ ಮಾಡಲು ಯಾವುದೇ ಸಮಸ್ಯೆ ಇಲ್ಲ. ಸಣ್ಣಪುಟ್ಟ ಯಾವುದೇ ತೊಂದರೆ ಇದ್ದರೂ ಸರಿಪಡಿಸಲಾಗುವುದು. ಉನ್ನತ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ನೀಡಲಾಗುವುದು ಎಂದರು. ಎಲ್ಲ ವಿಶ್ವವಿದ್ಯಾಲಯಗಳಿಗೆ ಅಗತ್ಯ ಅನುದಾನ ನೀಡಲಾಗುವುದು ಎಂದರು.
ಈ ವೇಳೆ ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಪೆÇ್ರ. ಶಶಿಕಾಂತ ಉಡಿಕೇರಿ, ಅತಿಥಿ ಉಪನ್ಯಾಸಕರ ಸಂಘದ ಅಧ್ಯಕ್ಷ ಡಾ. ಅರುಣಕುಮಾರ ಕುರ್ನೆ, ಪ್ರಧಾನ ಕಾರ್ಯದರ್ಶಿ ಡಾ. ಅಶೋಕ ದೊಡ್ಮನಿ, ಡಾ. ಜಗನ್ನಾಥ ಪಟ್ಟಣಕರ ಲಕ್ಷೀಕಾಂತ ಹುಬ್ಳಿ, ರವಿಕಿರಣ, ಪೀರಪ್ಪ ಸಜ್ಜನ್, ಡಾ.ಮಂಜುನಾಥ ಸೇರಿದಂತೆ ಇತರರು ಇದ್ದರು.





















