೫ ವರ್ಷಗಳಲ್ಲಿ ೧೦೦೦ ಹೊಸ ರೈಲು ಸಂಚಾರ


ನವದೆಹಲಿ, ಜು.೭- ದೇಶದಲ್ಲಿ ೫ ವರ್ಷಗಳಲ್ಲಿ ೧,೦೦೦ ಹೊಸ ರೈಲುಗಳನ್ನು ಓಡಿಸಲು ಯೋಜಿಸಿದೆ ಎಂದು ಕೇಂದ್ರ ರೈಲ್ವೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ವೈಷ್ಣವ್ ಹೇಳಿದ್ದಾರೆ.

ಜೊತೆಗೆ ೨೦೨೭ ರ ವೇಳೆಗೆ ವಾಣಿಜ್ಯ ಬುಲೆಟ್ ರೈಲು ಕಾರ್ಯಾಚರಣೆಗಳನ್ನು ಪ್ರಾರಂಭಿಸುವ ಗುರಿ ಹೊಂದಲಾಗಿದೆ.ಈ ನಿಟ್ಟಿನಲ್ಲಿ ಎಲ್ಲಾ ಕೆಲಸ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ದೆಹಲಿಯಲ್ಲಿ ನಡೆದ ಇಟಿ ದುಂಡುಮೇಜಿನ ಸಭೆಯಲ್ಲಿ ಈ ವಿಷಯ ತಿಳಿಸಿದ ಅವರು ದೇಶದಲ್ಲು ರೈಲ್ವೆ ಮೂಲಸೌಕರ್ಯ ಹೆಚ್ಚಳಕ್ಕೆ ಒತ್ತು ನೀಡಿಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ದೇಶದಲ್ಲಿ ಸುಸ್ಥಿರ ಸ್ಥಳೀಯ ಎಲೆಕ್ಟ್ರಾನಿಕ್ಸ್ ಪೂರೈಕೆ ಸರಪಳಿಯನ್ನು ಕ್ರಮಬದ್ಧ ರೀತಿಯಲ್ಲಿ ರಚಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮದ ಹೊಣೆಗಾರಿಕೆ ಜಾಗತಿಕ ಮಟ್ಟದಲ್ಲಿ ಪ್ರಬಲ ಭಾವನೆಯಾಗಿದ್ದು, ರಾಜಕೀಯ ಮತ್ತು ಸಾರ್ವಜನಿಕ ಒಮ್ಮತವು ವಿಕಸನಗೊಂಡರೆ ಭಾರತವು “ಕಾನೂನು ಚೌಕಟ್ಟನ್ನು ಬದಲಾಯಿಸಲು ಸಹಕಾರಿಯಾಗಲಿದೆ ಎಂದಿದ್ದಾರೆ.

ಕಳೆದ ಮೂರು ನಾಲ್ಕು ವರ್ಷಗಳಲ್ಲಿ, ಆ ಸಾಮರ್ಥ್ಯಗಳನ್ನು ಅಭಿವೃದ್ಧಿಪಡಿಸಲು ಈಗಾಗಲೇ ಹಲವು ಉಪಕ್ರಮ ಕೈಗೊಳ್ಳಲಾಗಿದೆ. ಎಲೆಕ್ಟ್ರಾನಿಕ್ಸ್ ಘಟಕ ಯೋಜನೆಯು ಮೊಬೈಲ್ ಫೋನ್ ಮತ್ತು ಇತರ ಎಲೆಕ್ಟ್ರಾನಿಕ್ ವಸ್ತುಗಳಿಗೆ ಪೂರಕವಾಗಲಿದೆ ಎಂದಿದ್ದಾರೆ.

ತೈವಾನ್, ಅಮೆರಿಕ, ದಕ್ಷಿಣ ಕೊರಿಯಾ ದೇಶಗಳಿಗೆ ಪೈಪೋಟಿ ನೀಡುವ ನಿಟ್ಟಿನಲ್ಲಿ ಮೊಬೈಲ್ ಪೋನ್ ತಯಾರಿಕೆ ದೇಶದಲ್ಲಿ ಅಭಿವೃದ್ಧಿ ಮಾಡಲಾಗುತ್ತಿದೆ ಎಂದಿದ್ದಾರೆ.

ಉದ್ಯೋಗ ಆಧಾರಿತ ಪ್ರೋತ್ಸಾಹಕ ಯೋಜನೆ ಜಾರಿಗೆ ಬಂದಿರುಗ ಹಿನ್ನೆಲೆಯಲ್ಲಿ ಉದ್ಯೋಗಿಗಳು ಮತ್ತು ಉದ್ಯೋಗದಾತರಿಗೆ ಅನುಕೂಕವಾಗಲಿದೆ ಎಲೆಕ್ಟ್ರಾನಿಕ್ಸ್ ಘಟಕ ಉತ್ಪಾದನಾ ಯೋಜನೆಯಿಂದ ಮತ್ತಷ್ಟು ಉದ್ಯೋಗ ಸೃಷ್ಟಿ ಆಗಲಿದೆ ಎಂದಿದ್ದಾರೆ.

ಆಪರೇಷನ್ ಸಿಂಧೂರ್ ಮೂಲಕ ಭಯೋತ್ಪಾದನೆ ತಾಣಗಳ ಮೇಲೆ ಯಶಸ್ವಿಯಾಗಿ ದಾಳಿ ನಡೆಸಲಾಗಿದೆ.. ಜಗತ್ತು ಭಾರತವನ್ನು ಬೆಂಬಲಿಸಿದೆ ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶಾಂಗ ನೀತಿ ಸಿದ್ಧಾಂತವನ್ನು ವ್ಯಾಪಕವಾಗಿ ಪ್ರಶಂಸಿಸಲಾಗಿದೆ ಎಂದಿದ್ದಾರೆ.

ಜಿ- ೨೦ ಶೃಂಗಸಭೆಯ ಸಮಯದಲ್ಲಿರಲಿ ಅಥವಾ ದ್ವಿಪಕ್ಷೀಯ ಸಭೆಗಳ ಸಮಯದಲ್ಲಿರಲಿ, ಪ್ರತಿಯೊಬ್ಬರೂ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ನಮಗೆ ಹೆಚ್ಚಿನ ಜವಾಬ್ದಾರಿ ಇರಬೇಕು ಎಂದು ಭಾವಿಸುತ್ತಾರೆ, ಸಾಮಾಜಿಕ ಮಾದ್ಯಮ ಅಷ್ಟು ಪ್ರಭಲವಾಗಿದೆ ಎಂದು ತಿಳಿಸಿದ್ದಾರೆ.