ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ದಿ. ಮುತ್ತಪ್ಪ ರೈ ಅವರ ಪುಣ್ಯಸ್ಮರಣೆ ಪ್ರಯುಕ್ತ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ನೂರಕ್ಕೂ ಅಧಿಕ ಬಡವಿದ್ಯಾರ್ಥಿಗಳಿಗೆ ಸಂಘಟನೆಯ ರಾಜ್ಯಾಧ್ಯಕ್ಷ ಬಿ.ಎನ್. ಜಗದೀಶ್‌ರವರು ಸಹಾಯಧನ ವಿತರಣೆ ಮಾಡಿದರು. ರಾಜ್ಯ ವಕೀಲಗಾರ ಘಟಕದ ಅಧ್ಯಕ್ಷ ನಾರಾಯಣಸ್ವಾಮಿ, ಮುಖ್ಯ ಸಲಹೆಗಾರ ಪ್ರಕಾಶ್ ರೈ, ಕಾರ್ಯಾಧ್ಯಕ್ಷ ಎಚ್.ರಾಮಚಂದ್ರಯ್ಯ, ಸಮಾಜ ಸೇವಕ ರಾಕೇಶ್ ಲೋಬೋ, ರಾಜ್ಯ ಹಿರಿಯ ಉಪಾಧ್ಯಕ್ಷ ರ. ಮುನಿಸ್ವಾಮಿ, ಪ್ರಧಾನ ಕಾರ್ಯದರ್ಶಿ ರಜತ್ ಗಗನ್ ರಾಜ್ ಮತ್ತಿತರರು ಉಪಸ್ಥಿತರಿದ್ದರು.