
ಕಲಬುರಗಿ: ಜಿಲ್ಲೆಯಲ್ಲಿ ಗೋಹತ್ಯೆ ಮತ್ತು ಸಾಗಾಣಿಕೆ ಹೆಚ್ಚುತ್ತಿದ್ದು, ಇದನ್ನು ತಡೆಯಬೇಕು ಹಾಗೂ ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಗೋವುಗಳ ವಧೆ ಮಾಡುವುದನ್ನು ಸಂಪೂರ್ಣ ನಿಷೇಧಿಸಬೇಕು ಎಂದು ಆಗ್ರಹಿಸಿ ವಿಶ್ವಹಿಂದು ಪರಿಷದ್ ಕಲಬುರಗಿ ಮಹಾನಗರ ಜಿಲ್ಲೆ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇಂದು ಪ್ರತಿಭಟನೆ ನಡೆಸಲಾಯಿತು. ಪರಿಷದ್ ಉತ್ತರ ಪ್ರಾಂತ ಅಧ್ಯಕ್ಷ ಲಿಂಗರಾಜ ಅಪ್ಪ, ಜಿಲ್ಲಾ ಅಧ್ಯಕ್ಷ ಶ್ರೀಮಂತ ನವಲದಿ, ಕಾರ್ಯದರ್ಶಿ ಅಶ್ವಿನಕುಮಾರ, ಪ್ರಮುಖರಾದ ಸಾಗರ ರಾಠೋಡ್ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.