
ಕಲಬುರಗಿ: ನಗರಕ್ಕೆ ಆಗಮಿಸಿದ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಹಾಗೂ ಕರ್ನಾಟಕ ವಿಧಾನ ಪರಿಷತ್ತಿನ ಸಭಾ ನಾಯಕರಾದ ಎನ್. ಎಸ್. ಭೋಸರಾಜು ಅವರನ್ನು ಜಿಲ್ಲಾ ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಜಗದೇವ ಗುತ್ತೇದಾರ ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ, ಕಾಂಗ್ರೆಸ್ ಮುಖಂಡರಾದ ಸಂತೋಷ ಬಿಲಗುಂದಿ, ಬಾಬು ಒಂಟಿ, ಸೋಮಶೇಖರ ಹಿರೇಮಠ, ಧರ್ಮರಾಜ ಹೇರೂರ, ಡಾ.ರಾಜಶೇಖರ ಪಾಟೀಲ ಹೇಬ್ಬಳಿ ಸೇರಿದಂತೆ ಪಕ್ಷದ ಕಾರ್ಯಕರ್ತರು ಇದ್ದರು.