
ಕಲಬುರಗಿ: ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಇಂದು ದೇಶದ ಮೊದಲ ಪ್ರಧಾನ ಮಂತ್ರಿ ಪಂಡಿತ್ ಜವಾಹರಲಾಲ್ ನೆಹರು ಅವರ ಪುಣ್ಯಸ್ಮರಣೆಯನ್ನು ಆಚರಿಸಲಾಯಿತು. ಪಕ್ಷದ ಜಿಲ್ಲಾ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಜಗದೇವ ಗುತ್ತೇದಾರ ಕಾಳಗಿ ಅವರು ನೆಹರು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಬಾಬುರಾವ ಜಹಾಗಿರದಾರ, ಭೀಮರಾವ ಟಿ.ಟಿ., ರಾಜಗೋಪಾಲ ರೆಡ್ಡಿ,ಶಿವಕುಮಾರ ಬಾಳಿ,ಶಕೀಲ್ ಸರಡಗಿ,ಧರ್ಮರಾಜ ಹೇರೂರು,ಸೋಮಶೇಖರ ಹಿರೇಮಠ ಸೇರಿದಂತೆ ಮತ್ತಿತರರು ಇದ್ದರು.