ಮೈಸೂರು ನಗರದಲ್ಲಿರುವ ತಮ್ಮ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೊನ್ನೆಯಷ್ಟೇ ಕೆ.ಆರ್. ನಗರದಲ್ಲಿ ಮುಖ್ಯಮಂತ್ರಿಗಳು ಗುದ್ದಲಿ ಪೂಜೆ ನೆರವೇರಿಸಿದ 515 ಕೋಟಿ ಅನುದಾನದಲ್ಲಿ 215 ಕೋಟಿ ನಾನು ಶಾಸಕನಾಗಿz್ದÁಗ ತಂದಿರೋದು. ಉಳಿದ 235 ಕೋಟಿ ಯೋಜನೆಗಳಿಗೆ ಗುದ್ದಲಿ ಪೂಜೆ ಮಾಡಿದ್ದಾರೆ. ಆದರೆ ಅದಕ್ಕೆ ಇನ್ನೂ ಟೆಂಡರ್ ಸಹ ಆಗಿಲ್ಲ. ಸಧ್ಯಕ್ಕೆ ಟೆಂಡರ್ ಆಗಿರೋದು 20 ಕೋಟಿಗೆ ಮಾತ್ರ. ಈ 20 ಕೋಟಿ ರೂ. ವೆಚ್ಚದ ಕಾಮಗಾರಿಗಳ ಗುದ್ದಲಿ ಪೂಜೆ ಮಾಡುವುದಕ್ಕೆ ಮುಖ್ಯಮಂತ್ರಿಗಳು ಹೆಲಿಕಾಪ್ಟರ್‍ನಲ್ಲಿ ಬಂದರು ಎಂದು ವಾಗ್ದಾಳಿ ನಡೆಸಿದರು.ಸುದ್ದಿಗೋಷ್ಠಿಯಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ, ಪಾಲಿಕೆ ಮಾಜಿ ಮೇಯರ್ ಆರ್.ಲಿಂಗಪ್ಪ, ಮುಖಂಡ ಚಲುವೇಗೌಡ ಸೇರಿದಂತೆ ಅನೇಕರು ಇದ್ದರು.