
ಗ್ರಾಮ ಪಂಚಾಯಿತಿಗಳು ಚುನಾಯಿತ ಜನಪ್ರತಿನಿಧಿಗಳನ್ನು ಒಳಗೊಂಡ ಸ್ಥಳೀಯ ಸರ್ಕಾರಗಳಾಗಿವೆ. ಪ್ರತಿ ಮೂರು ತಿಂಗಳಿಗೊಮ್ಮೆ ಗ್ರಾಮ ಪಂಚಾಯಿತಿಗಳು ನಡೆಸುವ ಕೆಡಿಪಿ ಸಭೆಗೆ ಸಂಬಂಧಪಟ್ಟ ಅಧಿಕಾರಿಗಳು ಹಾಜರಾಗಿ ತಮ್ಮ ಇಲಾಖೆಯ ಪ್ರಗತಿಯ ವರದಿಯನ್ನು ಮಂಡಿಸಬೇಕು. ಆದರೆ ಕೆಲವು ಇಲಾಖೆಗಳು ಕೆಡಿಪಿ ಸಭೆಗೆ ಹಾಜರಾಗದೇ ಇರುವುದು ಸರಿಯಲ್ಲ. ಇದು ಮುಂದಿನ ದಿನಗಳಲ್ಲಿ ಮರುಕಳಿಸಿದರೆ ನಾನು ಸಹಿಸುವುದಿಲ್ಲ ಎಂದು ಶಾಸಕ ಹೆಚ್.ಟಿ.ಮಂಜು ಹೇಳಿದರು.ಗ್ರಾಮ ಪಂಚಾಯಿತಿ ಅಧ್ಯಕ್ಷ ಎ.ಸಿ.ದಿವಿಕುಮಾರ್ ಕೆ.ಡಿ.ಪಿ ಸಭೆಯ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೆ.ಸುಷ್ಮಾ, ತಾಲ್ಲೂಕು ಯೋಜನಾಧಿಕಾರಿ ಮೋದೂರು ಶ್ರೀನಿವಾಸ್, ಜಿಲ್ಲಾ ದಿಶಾ ಸಮಿತಿ ಸದಸ್ಯ ನರಸನಾಯಕ್ ಮತ್ತಿತರರು ಕಾರ್ಯಕ್ರಮ ಕುರಿತು ಮಾತನಾಡಿದರು.ಸಭೆಯಲ್ಲಿ ಗ್ರಾಮ ಪಂಚಾಯಿತಿ ಪಿಡಿಓ ಶಿಲ್ಪ ಗ್ರಾ.ಪಂ.ಸದಸ್ಯ ಆರ್.ಶ್ರೀನಿವಾಸ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸುನಿತಾದ್ಯಾವಯ್ಯ, ಗ್ರಾಮ ಪಂಚಾಯಿತಿ ಸದಸ್ಯರಾದ ಬಿ.ಆರ್.ರಮೇಶ್, ಚನ್ನೇಗೌಡ, ನಂಜೇಗೌಡ, ಶ್ರೀನಿವಾಸ್.ಆರ್, ಫಯಾಜ್ ಉಲ್ಲಾಖಾನ್, ಎ.ಎಸ್.ದಿನೇಶ್, ಕುಮಾರಗೌಡ, ರಮಾನಂದ್, ಗುಡ್ಡೇನಹಳ್ಳಿ ಕುಮಾರ್, ರೇಣುಕಾ, ನೇತ್ರಾವತಿ, ಸಾವಿತ್ರಮ್ಮ, ಎಂ.ಟಿ.ಶಶಿರೇಖಾ, ಜಯಂತಿ, ಪಿಡಿಓ ಶಿಲ್ಪ ಸೇರಿದಂತೆ ಹಲವರಿದ್ದರು.