
ಕಲಬುರಗಿ: ಕೌನ್ಸಲಿಂಗ್ ಕರೆದು ಮೊದಲಿನ ತಾತ್ಕಾಲಿಕ ಜೇಷ್ಠತಾ ಪಟ್ಟಿಯಂತೆ ಒಳ ನೇಮಕಾತಿ ಮಾಡುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್ ಕ್ಲರ್ಕ್ ಕಂ.ಡಾಟಾ ಎಂಟ್ರಿ ಆಪರೇಟರ್ ಕ್ಷೇಮಾಭಿವೃದ್ಧಿ ನೌಕರರ ಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಇಂದು ಧರಣಿ ಸತ್ಯಾಗ್ರಹ ನಡೆಸಲಾಯಿತು. ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಪೂಜಾರಿ, ಶಿವಲಿಂಗಪ್ಪ ಶೀಲವಂತ, ಮಾಣಿಕರಾವ ತಳಕೇರಿ ಸೇರಿದಂತೆ ಮತ್ತಿತರರು ಇದ್ದರು.