
ಕೆಪಿಎಸ್‍ಸಿ ಭ್ರಷ್ಟಾಚಾರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಲೋಕಶಕ್ತಿ ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷ ರಾಘವೇಂದ್ರ ನೇತೃತ್ವದಲ್ಲಿ ಕೆಪಿಎಸ್‍ಸಿ ಅಧ್ಯಕ್ಷರಿಗೆ ಮತ್ತು ಸದಸ್ಯರಿಗೆ ಚಪ್ಪಲಿ ಹಾರ ಹಾಕಿ, ಪ್ರತಿಕೃತಿ ದಹಿಸಿ ನಗರದ ಫ್ರೀಡಂ ಪಾರ್ಕ್‍ನಲ್ಲಿಂದು ಪ್ರತಿಭಟನೆ ನಡೆಸಲಾಯಿತು. ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.