ಮೈಸೂರು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್), ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (ಕವಿಪ್ರನಿನಿ) ಹಾಗೂ ಮೈಸೂರು ವ್ಯಾಪ್ತಿಯ ಸಂಘ-ಸಂಸ್ಥೆಗಳ ಒಕ್ಕೂಟದ ವತಿಯಿಂದ ಶುಕ್ರವಾರ ನಗರದ ಕೆಸರೆಯಲ್ಲಿರುವ ಚಾವಿಸಾನಿನಿ ಕಾಲೋನಿಯಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಆಯೋಜಿಸಿದ್ದ ಸಸಿ ನೆಡುವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶಾಸಕ ರಮೇಶ್ ಬಂಡಿಸಿದ್ದೇಗೌಡ ಅವರು ಮಾತನಾಡಿದರು. ಸಮಾರಂಭದಲ್ಲಿ ತೋಟಗಾರಿಕೆ ಇಲಾಖೆ ನಿವೃತ್ತ ಉಪ ನಿರ್ದೇಶಕ ಡಾ.ಬೆಲವಲ ರಾಮಕೃಷ್ಣ, ಮೈಸೂರು ವಲಯದ ಮುಖ್ಯ ಇಂಜಿನಿಯರ್ ಡಿ.ಜೆ.ದಿವಾಕರ್, ಅಧೀಕ್ಷಕ ಇಂಜಿನಿಯರುಗಳಾದ ಸೋಮಶೇಖರ್, ಸುನೀಲ್ ಕುಮಾರ್, ಸೆಸ್ಕ್ ಪ್ರಧಾನ ವ್ಯವಸ್ಥಾಪಕಿ(ತಾಂತ್ರಿಕ) ಶರಣಮ್ಮ ಎಸ್.ಜಂಗಿನ, ಪ್ರಧಾನ ವ್ಯವಸ್ಥಾಪಕ ಕೆ.ಎಲ್.ಲೋಕೇಶ್ ಇತರರಿದ್ದರು.