
ಪ್ರತಿಯೊಬ್ಬರು ಮಾನಸಿಕ ಹಾಗೂ ದೈಹಿಕ ಆರೋಗ್ಯ ಉತ್ತಮ ಪಡಿಸಿಕೊಳ್ಳಲು ಯೋಗ ಸಹಕಾರಿಯಾಗಿದ್ದು, ದೇಹ, ಮನಸ್ಸಿನ ಸದೃಢತೆ ಹಾಗೂ ಸುಸ್ಥಿತಿ ಮತ್ತು ಮನೋಲ್ಲಾಸಕ್ಕೆ ಯೋಗ ನೆರವಾಗಲಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್, ಜಿಲ್ಲಾ ಆಯುಷ್ ಅಧಿಕಾರಿ ಡಾ. ಬಿ.ಪಿ. ಸತೀಶ್ ಕುಮಾರ್, ಇತರರು ಕಾರ್ಯಕ್ರಮದಲ್ಲಿ ಇದ್ದರು.