
ಚಾಮುಂಡಿ ಬೆಟ್ಟ ಸೇರಿದಂತೆ ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಜಾರಿಗೊಳಿಸುವಂತೆ ಒತ್ತಾಯಿಸಿ ಚಾಮುಂಡೇಶ್ವರಿ ಭಕ್ತ ವೃಂದದಿಂದ ಸಂಹಿ ಸಂಗ್ರಹ ಅಭಿಯಾನ ನಡೆಸಲಾಯಿತು.ಕರ್ನಾಟಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ವಿನಯ್ ಕುಮಾರ್, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಎಂಡಿಎ ಮಾಜಿ ಸದಸ್ಯ ನವೀನ್ ಕುಮಾರ್, ನಿರೂಪಕ ಅಜಯ್ ಶಾಸ್ತ್ರಿ, ಚಾಮುಂಡೇಶ್ವರಿ ಭಕ್ತ ವೃಂದದ ಆನಂದ್, ರವಿಚಂದ್ರ, ಮಹಾನ್ ಶ್ರೇಯಸ್, ಮಹೇಶ್, ಬಸವರಾಜ್, ಎಸ್.ಎನ್.ರಾಜೇಶ್ ಸೇರಿದಂತೆ ಹಲವರು ಇದ್ದರು.