ಗುಣಮಟ್ಟದ ಕಾಮಗಾರಿಗಳು ನಡೆದರೆ ಮಾತ್ರ ಸರ್ಕಾರದ ಹಣ ಸದ್ಬಳಕೆಯಾಗಲು ಸಾಧ್ಯ. ಗ್ರಾಮ ಪಂಚಾಯತಿ ಸದಸ್ಯರುಗಳು ಮತ್ತು ಆಯಾ ಭಾಗದ ಜನ ತಮ್ಮ ತಮ್ಮ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಅಭಿವೃದ್ದಿ ಕಾಮಗಾರಿಗಳ ಮೇಲೆ ನಿಗಾವಹಿಸಿ ಗುಣಮಟ್ಟದ ಕಾಮಗಾರಿಗಳು ನಡೆಯುವಂತೆ ನೋಡಿಕೊಳ್ಳಬೇಕೆಂದು ಶಾಸಕ ಹೆಚ್.ಟಿ.ಮಂಜು ಕರೆ ನೀಡಿದರು.ಗ್ರಾ.ಪಂ ಅಧ್ಯಕ್ಷೆ ಹೇಮಾವತಿ ಉಪಾಧ್ಯಕ್ಷ ರಾಜು, ಸದಸ್ಯರಾದ ರಮೇಶ್, ನಂಜಪ್ಪ, ಮಂಜುನಾಥ್, ಮಹದೇವಮ್ಮ, ಸುಲೋಚನಾ, ಕಿಟ್ಟಿ, ಗೌಡ ಆನಂದ್, ಸಾರಂಗಿ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕ ನಾಗೇಶ್, ತಾ.ಪಂ ಮಾಜಿ ಸದಸ್ಯ ಮಲ್ಲೇನಹಳ್ಳಿ ಮೋಹನ್, ಟಿ.ಎ.ಪಿ.ಸಿ.ಎಂ.ಎಸ್ ನಿರ್ದೇಶಕ ಕೊರಟೀಕೆರೆ ದಿನೇಶ್,ಅಜಯ್ ರಾಮೇಗೌಡ, ಶಾಸಕರ ಆಪ್ತ ಸಹಾಯಕರಾದ ಅರಳಕುಪ್ಪೆ ಪ್ರತಾಪ್, ಧ್ರುವಕುಮಾರ್ ಸೇರಿದಂತೆ ಹಲವರಿದ್ದರು.