ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೊಮ್ಮ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಬಿಸಿ ಊಟ ಮಾಡುವ ವಿಚಾರದಲ್ಲಿ ಅಸ್ಪೃಶ್ಯತೆ ಆಚರಣೆಯಾಗಿದೆ ಎಂಬ ವಿಚಾರ ತನಿಖೆ ನಡೆಯುತ್ತಿದ್ದು, ಗ್ರಾಮದಲ್ಲಿ ಸಾಮರಸ್ಯ ಹಾಳು ಮಾಡುವುದು ಒಳ್ಳೆಯದಲ್ಲ. ಶಿಕ್ಷಣ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯ ಪ್ರಮುಖ ಕಾರಣವಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಎನ್. ಮಹೇಶ್ ತಿಳಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಮೂಡ್ನಾಕೂಡು ಪ್ರಕಾಶ್, ಹೊನ್ನೂರು ಮಹದೇವಸ್ವಾಮಿ, ವೇಣುಗೋಪಾಲ್, ರಾಮುಸಮುದ್ರ ಶಿವಣ್ಣ, ಮುಖಂಡರಾದ ಲೋಕೇಶ್ ಹಾಗೂ ಗ್ರಾಮದ ಮುಖಂಡರು, ಮುಖ್ಯಶಿಕ್ಷಕರು, ಪೋಷಕರು ಇದ್ದರು.