
ಚಾಮರಾಜನಗರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಂಗನವಾಡಿ ಮೂಲಸೌಕರ್ಯದ ಜೊತೆಗೆ ಮಕ್ಕಳಿಗೆ ಹಾಗೂ ಗರ್ಭಿಣಿಯರಿಗೆ ನೀಡುವ ಆಹಾರ ಗುಣಮಟ್ಟದಿಂದ ಕೂಡಿರುವಂತೆ ನೋಡಿಕೊಳ್ಳಬೇಕೆಂದು ಲೋಕಸಭಾ ಸದಸ್ಯ ಸುನೀಲ್ ಬೋಸ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಚ್.ವಿ. ಚಂದ್ರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಇತರೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.