
ಜಿಲ್ಲೆಯಲ್ಲಿನ ದೇವಸ್ಥಾನ, ಚರ್ಚ್ ಮತ್ತು ಮಸೀದಿಗಳಲ್ಲಿ ಬಾಲ್ಯ ವಿವಾಹ ನಡೆಯುವುದು ಕಂಡುಬಂದಲ್ಲಿ ನೇರವಾಗಿ ಮಖ್ಯಸ್ಥರ ಮೇಲೆ ಕ್ರಮಕೈಗೊಳ್ಳ ಲಾಗುವುದು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಮಿಕ್ಕೆರೆ ವೆಂಕಟೇಶ್ ತಿಳಿಸಿದರು.ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ರಾಜಮೂರ್ತಿ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ -1 (ಆಡಳಿತ) ಎಂ.ಬಾಬು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಶ್ಮಿ ಅವರು ಹಾಜರಿದ್ದರು.