ಬಿಜೆಪಿ ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಹಾಗೂ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ವಿರುದ್ಧ ಅಸಂಸದೀಯ ಪದ ಬಳಕೆ ಹಿನ್ನೆಲೆ ಇವರನ್ನು ವಿಧಾನ ಪರಿಷತ್ ಸದಸ್ಯತ್ವದಿಂದ ಅಮಾನತು ಗೊಳಿಸುವಂತೆ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಕೆಪಿಸಿಸಿ ನಿಯೋಗದ ಸದಸ್ಯರು ಮನವಿ ಸಲ್ಲಿಸಿದರು. ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್, ಪುಟ್ಟರಾಜು, ಸುಧಾಕರ್, ಮತ್ತಿತರರು ಇದ್ದಾರೆ.