
ಜಿಲ್ಲಾ ಮತ್ತು ತಾಲೂಕು ಶರಣ ಸಾಹಿತ್ಯ ಪರಿಷತ್ತು ಶೇಷಾದ್ರಿಪುರಂ ಪದವಿ ಕಾಲೇಜಿನಲ್ಲಿ ಕನ್ನಡ ವಿಭಾಗ, ಆಂತರಿಕ ಗುಣಮಟ್ಟ ಭರವಸೆ ಕೋಶದ ಸಹಯೋಗದಲ್ಲಿ ಗುರುವಾರ ಏರ್ಪಡಿಸಿದ್ದ ವಚನ ಪಿತಾಮಹ ಡಾ.ಫ.ಗು. ಹಳಕಟ್ಟಿ ಜನ್ಮದಿನಾಚರಣೆಯಲ್ಲಿ ಗೌಡರ ಸಿದ್ದಪ್ಪ ಮತ್ತು ಶರಣೆ ಮರಮ್ಮ ದತ್ತಿ ಉಪನ್ಯಾಸ ನೀಡಿದ ಅವರು, ಇಂತಹ ಸಾಹಿತ್ಯವನ್ನು ಸಂರಕ್ಷಿಸಿ, ನಮಗೆ ಉಳಿಸಿಕೊಟ್ಟ ಕೀರ್ತಿ ಡಾ.ಫ.ಗು. ಹಳಕಟ್ಟಿ ಅವರಿಗೆ ಸಲ್ಲುತ್ತದೆ ಎಂದರು.ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ಸಿ.ಪಿ. ಲಾವಣ್ಯ ಸ್ವಾಗತಿಸಿದರು. ಸಹಾಯಕ ಪ್ರಾಧ್ಯಾಪಕಿ ಬಿ.ಕೆ. ರಶ್ಮಿ ವಂದಿಸಿದರು, ಸಹಾಯಕ ಪ್ರಾಧ್ಯಾಪಕ ಕೆ.ಎಂ. ಸಿದ್ದಪ್ಪ ಕಾರ್ಯಕ್ರಮ ನಿರೂಪಿಸಿದರು. ರುಚಿತಾ ರಾಜೇಶ್ ಪ್ರಾರ್ಥಿಸಿದರು.