ಚಾಮರಾಜನಗರದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲೆಯಲ್ಲಿ 2025- 26ನೇ ಸಾಲಿನ ದಸರಾ ಕ್ರೀಡಾಕೂಟ ಹಾಗೂ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಆಯೋಜನೆ ಸಂಬಂಧ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಮಾತನಾಡಿದರು. ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್, ನಗರಸಭೆ ಪೌರಾಯುಕ್ತ ಎಸ್.ವಿ. ರಾಮದಾಸ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಕೆ. ಸುರೇಶ್, ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.