
ಕಲಬುರಗಿ:ಶರಣಬಸವೇಶ್ವರ ಮಹಾದಾಸೋಹ ಸಂಸ್ಥಾನದ 8ನೇ ಪೀಠಾಧಿಪತಿ ಡಾ. ಶರಣಬಸವಪ್ಪ ಅಪ್ಪ ಅವರು ಚಿಕಿತ್ಸೆ ಪಡೆಯುತ್ತಿರುವ ಖಾಸಗಿ ಆಸ್ಪತ್ರೆಗೆ, ಮೇಯರ್ ವರ್ಷಾ ರಾಜೀವ್ ಜಾನೆ ಹಾಗೂ ಉಪ ಮೇಯರ್ ತೃಪ್ತಿ ಶ್ರೀನಿವಾಸ್ ಲಾಖೆ ಭೇಟಿ ನೀಡಿ, ಶೀಘ್ರವಾಗಿ ಗುಣಮುಖರಾಗಲಿ ಎಂದು ಪ್ರಾರ್ಥನೆ ಮಾಡಿ ನಂತರ ಆಶೀರ್ವಾದ ಪಡೆದರು.ಈ ಸಂದರ್ಭದಲ್ಲಿ ಮಾತೋಶ್ರೀ ಡಾ ದಾಕ್ಷಾಯಣಿ ಎಸ್ ಅಪ್ಪಾಜಿ, ಅಲ್ಲಮಪ್ರಭು ದೇಶಮುಖ ಇದ್ದರು.