ರಾಜ್ಯದ ಪ್ರಥಮ ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನವರ ೨೨೮ನೇ ಜಯಂತಿ ಪ್ರಯುಕ್ತ ರಾಯಣ್ಣನವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾಲಾರ್ಪಣೆ ಮಾಡಿದರು. ಮಾಜಿ ಸಚಿವ ಹೆಚ್.ಎಂ. ರೇವಣ್ಣ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಗೊಳ್ಳಿ ಕೃಷ್ಣಮೂರ್ತಿ ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಿದ್ದರು.